ಮಧ್ವರು, ವಾದಿರಾಜರ ಸಾಧನೆಯಲ್ಲಿ ವೈಜ್ಞಾನಿಕತೆ

 ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸವದಲ್ಲಿ ಬಾಳಗಾರು ಮಠದ ಶ್ರೀ ಅಕ್ಷೋಭ್ಯರಾಮ ಪ್ರಿಯತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಶ್ರೀನಿವಾಸ ತಂತ್ರಿ, ಡಾ.ರಾಧಾಕೃಷ್ಣ ಎಸ್.ಐತಾಳ್ ಮೊದಲಾದವರಿದ್ದರು.
ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸವದಲ್ಲಿ ಬಾಳಗಾರು ಮಠದ ಶ್ರೀ ಅಕ್ಷೋಭ್ಯರಾಮ ಪ್ರಿಯತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಶ್ರೀನಿವಾಸ ತಂತ್ರಿ, ಡಾ.ರಾಧಾಕೃಷ್ಣ ಎಸ್.ಐತಾಳ್ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಶಿರ್ವ

ಶ್ರೀ ಮಧ್ವಚಾರ್ಯರು ಮತ್ತು ಶ್ರೀ ವಾದಿರಾಜರ ಸಾಧನೆಗಳು ಆಳವಾದ ವೈಜ್ಞಾನಿಕ ಬುದ್ಧಿವಂತಿಕೆ ಹೊಂದಿದೆ ಎಂದು ತೀರ್ಥಹಳ್ಳಿಯ ಬಾಳಗಾರು ಅಕ್ಷೋಭ್ಯ ಮಹಾಸಂಸ್ಥಾನ ಮಠದ ಕಿರಿಯ ಯತಿ ಶ್ರೀ ಅಕ್ಷೋಭ್ಯರಾಮ ಪ್ರಿಯತೀರ್ಥ ಸ್ವಾಮೀಜಿ ಹೇಳಿದರು.
ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳ ಕಾಲೇಜು ವಾರ್ಷಿಕೋತ್ಸವದಲ್ಲಿ ಶುಕ್ರವಾರ ಆಶೀರ್ವಚನ ನೀಡಿದರು.
ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಡಿಸಿ ಎಕ್ಸ್ ಮುಖ್ಯಸ್ಥ ಡಾ.ರಾವೇಂದ್ರ ರಾವ್ ಇದ್ದರು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ, ಸೋದೆ ಸಮೂಹ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್, ಸಂಸ್ಥೆಯ ಟ್ರಸ್ಟಿ ಎಚ್.ವಿ.ಗೌತಮಾ, ಸುಂದರ್ ಮಡಾಕ್ಷಿರ, ಹರೀಶ್ ಬೆಳ್ಮಣ್, ಶ್ಯಾಮ್ ಸುಂದರ್, ಡೀನ್‌ಗಳಾದ ಡಾ.ಸುದರ್ಶನ್ ರಾವ್, ಡಾ.ಸಚಿನ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ದೀಪಿಕಾ ಬಿ.ವಿ. ಮೊದಲಾದವರಿದ್ದರು.
ಪ್ರತಿಷ್ಠಾನ ಕಾರ್ಯದರ್ಶಿ ರತ್ನಕುವಾರ್ ಸ್ವಾಗತಿಸಿದರು. ಪ್ರಾಂಶುಪಾಲ ಡಾ.ನಾಗರಾಜ್ ಭಟ್, ನಿರಾಮಯ ಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಪ್ರಾಂಶುಪಾಲ ಶಿವ ಶಂಕರ್ ಪೈ ನಿರಾಮಯ ಕಾಲೇಜುಗಳ 2025-26ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ನಿರಾಮಯ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ರೋಶನಿ ರೊಡ್ರಿಗಸ್, ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಸಚಿನ್ ಪ್ರಭು ಬಾಳಗಾರು ಅಕ್ಷೋಭ್ಯ ಮಹಾಸಂಸ್ಥಾನ ಮಠದ ಶ್ರೀಪಾದರನ್ನು ಪರಿಚಯಿಸಿದರು. ಮೆಕಾನಿಕಲ್ ವಿಭಾಗ ಮುಖ್ಯಸ್ಥ ಡಾ.ರಾಜಯತೀಶ್ ಯಾದವ್, ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್ ಮತ್ತು ರಿಸರ್ಚ್ ಡೀನ್ ಡಾ.ಸಚಿನ್ ಭಟ್ ವಿದ್ಯಾರ್ಥಿವೇತನ ಪಡೆದವರ ವಿವರ ನೀಡಿದರು. ಶರಣ್ಯಾ ತಂತ್ರಿ ಪ್ರಾರ್ಥಿಸಿದರು. ಪ್ರಾಧ್ಯಾಪಕರಾದ ಸುಧೀರ್ ಮತ್ತು ಕಾವ್ಯಲಕ್ಷ್ಮೀ ನಿರೂಪಿಸಿದರು.

ವಿದ್ಯಾರ್ಥಿವೇತನ ವಿತರಣೆ

ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ, ವಿದ್ಯಾಪ್ರತಿಷ್ಠಾ ವಿದ್ಯಾರ್ಥಿವೇತನ ಹಾಗೂ ಗೌತಮ ಫೌಂಡೇಶನ್‌ನಿಂದ ನೀಡಲ್ಪಟ್ಟ ವಿದ್ಯಾರ್ಥಿವೇತನ ವಿತರಿಸಲಾಯಿತು. ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ಕೊಡುವ ಶ್ರೀ ಮಧ್ವ ವಾದಿರಾಜ ಪ್ರಶಸ್ತಿಯನ್ನು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅನ್ನಪೂರ್ಣಾ ಶೆಣೈ, ಗಣಕಯಂತ್ರ ವಿಭಾಗದ ನತಾಶ ಲೋಬೋ ಮತ್ತು ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವಿಭಾಗದ ನಾಗೇಂದ್ರ ಪೈ, ಗಣಕಯಂತ್ರ ವಿಭಾಗದ ಸಾತ್ವಿಕ್ ಭಟ್ ಅವರಿಗೆ ಪ್ರದಾನಿಸಲಾಯಿತು. ದ್ವಿತೀಯ ಮತ್ತು ತೃತೀಯ ವರ್ಷದ ಉತ್ತಮ ವಿದ್ಯಾರ್ಥಿಗಳಿಗೆ ಹಯವದನ ಪ್ರಶಸ್ತಿ ನೀಡಲಾಯಿತು. ಡಾಕ್ಟರೇಟ್ ಪದವಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net