ಕಾರಿಗೆ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಪೆಟ್ರೋಲ್ ಬಂಕ್ ಬಳಿ ಘಟನೆ
ACCIDENT
ACCIDENT
Published on: 

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಪೆಟ್ರೋಲ್ ಬಂಕ್ ಬಳಿ ಭಾನುವಾರ ಸ್ಕೂಟರ್ ಸವಾರ ಏಕಾಏಕಿ ಬಲಕ್ಕೆ ತಿರುಗಿಸಿದ ಪರಿಣಾಮ ಕಾರಿಗೆ ಡಿಕ್ಕಿಯಾಗಿ ಸವಾರ ಪಡುಬಿದ್ರಿ ನಡ್ಸಾಲಿನ ಪಿ.ಎ.ಮಾಧವ ರಾವ್(68) ಎಂಬುವರು ಮೃತಪಟ್ಟಿದ್ದಾರೆ.

ಘಟನೆಯಿಂದ ಹೆದ್ದಾರಿಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.