ಕುಂದಾಪುರ: ನಮಾಜ್ ಮಾಡಲು ಮಸೀದಿಗೆ ಹೋಗುತ್ತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿವೆ.. ಗಂಗೊಳ್ಳಿ ಗ್ರಾಮದ ಸುಲ್ತಾನ್ ಮೊಹಲ್ಲಾ ನಿವಾಸಿ ಅಹಮದ್(45) ಗಾಯಗೊಂಡವರು. ಮನೆಯಿಂದ ಸುಲ್ತಾನ ಮೊಹಲ್ಲಾ ಪಳ್ಳಿಗೆ ನವಾಜ್ ವಾಡಲು ಸುಲ್ತಾನ್ ಮೊಹಲ್ಲಾ ರಸ್ತೆಯಲ್ಲಿ ನಡೆದು ಹೋಗುತ್ತಿರುವಾಗ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. .ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.