ವಿಜಯವಾಣಿ ಸುದ್ದಿಜಾಲ ಕಾರ್ಕಳ
ಘಟಿಕೋತ್ಸವವು ಕೇವಲ ಪದವಿ ಪ್ರದಾನ ಸಮಾರಂಭವಲ್ಲ. ಹಲವು ವರ್ಷಗಳ ಪರಿಶ್ರಮ, ಕಲಿಕೆ, ಪ್ರಯೋಗಾಲಯದ ಅನುಭವ, ಪರೀಕ್ಷೆ ಹಾಗೂ ಸವಾಲುಗಳನ್ನು ಎದುರಿಸಿ ಸಾಧಿಸಿದ ಮೈಲಿಗಲ್ಲು ಮತ್ತು ಮುಂದಿನ ಬದುಕಿಗೆ ಹೊಸ ಅವಕಾಶದ ಸುಭದ್ರ ಮೆಟ್ಟಿಲಾಗಿದೆ ಎಂದು ಬೆಂಗಳೂರಿನ ಎಸ್‌ವ್ಯಾಸ್ ವಿಶ್ವವಿದ್ಯಾಲಯ ಕುಲಪತಿ ಡಾ.ಪ್ರಹ್ಲಾದ ರಾಮ ರಾವ್ ಹೇಳಿದರು.
ನಿಟ್ಟೆ ಕ್ಯಾಂಪಸ್‌ನಲ್ಲಿ ಶನಿವಾರ ನಡೆದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಎರಡನೇ ಅಧಿವೇಶನದಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯ ವಿವಿಧ ವಿಭಾಗಗಳ 1,148 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ವಿವಿಧ ವಿಭಾಗಗಳ ಸಾಧಕ ವಿದ್ಯಾರ್ಥಿಗಳಿಗೆ ಸುವರ್ಣ ಪದಕ ನೀಡಿ ಗೌರವಿಸಿ ಮಾತನಾಡಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪದವಿಯೊಂದಿಗೆ ಪಡೆದಿರುವ ಜ್ಞಾನ ಮತ್ತು ಕೌಶಲವನ್ನು ಜೀವನದಲ್ಲಿ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಕುಲಾಧಿಪತಿ ವಿಶಾಲ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ವಿವಿ ಐಎಸ್‌ಆರ್‌ಸಿ ಆರ್‌ಎಲ್ ವಿಭಾಗ ಉಪಾಧ್ಯಕ್ಷ ಡಾ.ಸತೀಶ್ ಕುವಾರ್ ಭಂಡಾರಿ, ಬೆಂಗಳೂರು ಕ್ಯಾಂಪಸ್ ಆಡಳಿತಾಧಿಕಾರಿ ರೋಹಿತ್ ಪೂಂಜ, ನಿಟ್ಟೆ ಸಮೂಹ ವಿದ್ಯಾಸಂಸ್ಥೆ ಟ್ರಸ್ಟಿ ವಿರೇನ್ ಹೆಗ್ಡೆ, ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯ ಡಾ.ಒಮೀದ್ ಅನ್ಸಾರಿ, ಬೆಂಗಳೂರು ಕ್ಯಾಂಪಸ್ ಉಪಾಧ್ಯಕ್ಷ ಪ್ರೊ.ಸಂದೀಪ್ ಶಾಸಿ, ಕುಲಸಚಿವ ಡಾ.ಹರ್ಷ ಹಾಲಹಳ್ಳಿ, ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ.ಪ್ರಸಾದ್ ಬಿ.ಶೆಟ್ಟಿ, ಬೆಂಗಳೂರು ಕ್ಯಾಂಪಸ್ ಪರೀಕ್ಷಾಂಗ ಮುಖ್ಯಸ್ಥ ಡಾ.ಪ್ರಶಾಂತ್ ವಿ. ಮೊದಲಾದವರಿದ್ದರು.
ನಿಟ್ಟೆ ವಿವಿ ಕುಲಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ಸ್ವಾಗತಿಸಿದರು. ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್‌ನ ಪರೀಕ್ಷಾ ನಿಯಂತ್ರಕ ಡಾ.ಸುಬ್ರಹ್ಮಣ್ಯ ಭಟ್ ಕೆ. ಪದವಿ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಸಹ ಪ್ರಾಧ್ಯಾಪಕ ಡಾ.ಗ್ರೈನಲ್ ಡಿಮೆಲ್ಲೊ ಹಾಗೂ ಡಾ.ಸ್ನೇಹಾ ನಾಯಕ್ ನಿರೂಪಿಸಿದರು.
ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಜ್ಞಾನ, ಮೌಲ್ಯ ಹಾಗೂ ಸಾವಾಜಿಕ ಹೊಣೆಗಾರಿಕೆ ಬೆಳೆಸಬೇಕು. ಸಂಸ್ಥೆಯಲ್ಲಿ ಪಡೆದ ಶಿಕ್ಷಣವನ್ನು ವೃತ್ತಿಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉಪಯುಕ್ತರಾಗಬೇಕು.
ವಿಶಾಲ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಕುಲಾಧಿಪತಿ