ಬ್ರಹ್ಮಾವರ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಶೆಟ್ಟಿ, ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ ಪಿ.ಕೆ.ಇದ್ದರು. ಜ್ಞಾನವಿಕಾಸ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಪರಿಸರದ ಹಿರಿಯ ಮಹಿಳೆಯರಾದ ಚಿತ್ರಪಾಡಿಯ ಪ್ರೇಮಾ, ಪದ್ದು, ನರಸಿ, ಗಿರಿಜಾ ಅವರನ್ನು ಗೌರವಿಸಲಾಯಿತು. ಯೋಜನೆಯ ಶ್ರೀಲಕ್ಷ್ಮೀ ಪ್ರಭು ಸ್ವಾಗತಿಸಿದರು. ಜ್ಞಾನವಿಕಾಸ ಯೋಜನೆಯ ತಾಲೂಕು ಸಮನ್ವಯಾಧಿಕಾರಿ ಪುಷ್ಪಲತಾ ವರದಿ ವಾಚಿಸಿದರು. ವಲಯ ಮೇಲ್ವಿಚಾರಕ ನಾಗೇಶ ನಿರೂಪಿಸಿದರು. ಸೇವಾಪ್ರತಿನಿಧಿ ಗುಲಾಬಿ ಬಂಗೇರ ವಂದಿಸಿದರು.