ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಅಪಘಾತಕ್ಕೆ ಬಲಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ
 ಗುರುದಾಸ ಶೆಣೈ
ಗುರುದಾಸ ಶೆಣೈ
Published on: 

ಉಡುಪಿ: ಬ್ಯಾಂಕ್ ನಿವೃತ್ತ ಉದ್ಯೋಗಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಬೇಳೂರು ಗುರುದಾಸ ಶೆಣೈ(68) ರಸ್ತೆ ಅಪಘಾತದಲ್ಲಿ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಸೈಕಲ್‌ನಲ್ಲಿ ತೆರಳುತ್ತಿದ್ದ ಅವರು ಕೋಟ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತರಾದರು. ಸಂಜೆ 4ಕ್ಕೆ ಕೋಟ ಹಾಲಿನ ಡೇರಿ ಹಿಂಭಾಗದಲ್ಲಿರುವ ವೆಂಕಟೇಶ ನಿಲಯದಲ್ಲಿ ಅಂತ್ಯಕ್ರಿಯೆಯ ವಿಧಿವಿಧಾನ ನಡೆಸಲಾಯಿತು.

36 ವರ್ಷಗಳ ಕಾಲ ಕಾರ್ಪೋರೇಷನ್ ಬ್ಯಾಂಕ್(ಈಗಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ) ಹಲವಾರು ಶಾಖೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net