ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಶಮೀರ್ ಎಂಬುವರು ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ಸಕಲೇಶಪುರ ಕಡೆಯಿಂದ ಬರುತ್ತಿದ್ದ ಬೆಂಗಳೂರು ನೆಲಮಂಗಲ ನಿವಾಸಿ ರಾಜ ಎಂ.(56) ಎಂಬುವರಿಗೆ ಸೇರಿದ ಮದ್ಯದ ಲೋಡ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮದ್ಯದ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಾರ್ಕ್ ವಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ತಾಗಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಟನೆಯಿಂದ ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ ಎನ್ನಲಾಗಿದೆ.