ಬೈಕ್ ಅಪಘಾತದಲ್ಲಿ ಗಂಭೀರ

ACCIDENT
ACCIDENT
Published on
ಕಾರ್ಕಳ: ಕಾರ್ಕಳದ ಬೈಪಾಸ್ ಬಳಿ ಶಿವತಿಕೆರೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಕಳ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ನಂದಳಿಕೆಯ ಶಿವಪ್ರಸಾದ್ ಭಾನುವಾರ ಸಂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಎಸ್‌ಐಆರ್ ಮೀಟಿಂಗ್‌ಗೆ ಹಾಜರಾಗಿ ರಾತ್ರಿ 7.30ರ ಸುಮಾರಿಗೆ ನಂದಳಿಕೆಯ ಮನೆ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಶಿವತಿಕೆರೆ ಬಳಿಯ ನಾಯರ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ಹಾಕಿ ಯೂಟರ್ನ್ ತೆಗೆದುಕೊಳ್ಳಲು ಮುಂದಾದಾಗ ಹಿಂದಿನಿಂದ ಅತಿ ವೇಗವಾಗಿ ಸ್ಕೂಟರ್‌ನಲ್ಲಿ ಬಂದ ಯುವಕ ನಿಯಂತ್ರಣ ತಪ್ಪಿ ಶಿವಪ್ರಸಾದ್ ಅವರ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಶಿವಪ್ರಸಾದ್ ರಾವ್ ಅವರ ತಲೆಗೆ ಗಂಭೀರ ಗಾಯಗಳೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net