ಸೇವಾ ಮನೋಭಾವವೇ ಅತ್ಯುನ್ನತ ಮೌಲ್ಯ

 ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ ಐಎಂಎ ಮೂಡುಬಿದಿರೆ ಘಟಕ ಪದಗ್ರಹಣ ಸಮಾರಂಭದಲ್ಲಿ ಡಾ.ಎಂ.ಮೋಹನ ಆಳ್ವ, ಡಾ.ಟಿ.ಎ.ವೀರಭದ್ರಯ್ಯ, ಡಾ.ಯೋಗಾನಂದ ರೆಡ್ಡಿ ಉಪಸ್ಥಿತರಿದ್ದರು.
ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ ಐಎಂಎ ಮೂಡುಬಿದಿರೆ ಘಟಕ ಪದಗ್ರಹಣ ಸಮಾರಂಭದಲ್ಲಿ ಡಾ.ಎಂ.ಮೋಹನ ಆಳ್ವ, ಡಾ.ಟಿ.ಎ.ವೀರಭದ್ರಯ್ಯ, ಡಾ.ಯೋಗಾನಂದ ರೆಡ್ಡಿ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ವೈದ್ಯಕೀಯ ವೃತ್ತಿಯಲ್ಲಿ ರೋಗಿಯ ಸುರಕ್ಷತೆ, ನೈತಿಕತೆ ಹಾಗೂ ಸೇವಾ ಮನೋಭಾವವೇ ಅತ್ಯಂತ ಪ್ರಮುಖ ಮೌಲ್ಯಗಳಾಗಿದ್ದು, ವೈದ್ಯ-ರೋಗಿ ಸಂಬಂಧವು ಪರಸ್ಪರ ನಂಬಿಕೆ ಮತ್ತು ಜವಾಬ್ದಾರಿಯ ಆಧಾರದ ಮೇಲೆ ನಿರ್ಮಾಣವಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಮೂಡುಬಿದಿರೆಯ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮೂಡುಬಿದಿರೆ ಘಟಕ ಪದಗ್ರಹಣ ಸಮಾರಂಭ ಹಾಗೂ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವೈದ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಐಎಂಎ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ.ಟಿ.ಎ.ವೀರಭದ್ರಯ್ಯ, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಅಧೀಕ್ಷಕ ಡಾ.ಡಿ.ಎಸ್.ಶಿವಪ್ರಕಾಶ್, ಐಎಂಒ ಕರ್ನಾಟಕ ಘಟಕ ವಿಭಾಗೀಯ ಸಂಯೋಜಕ ಡಾ.ಜಿ.ಕೆ.ಭಟ್ ಮುಖ್ಯ ಅತಿಥಿಯಾಗಿದ್ದರು. ಐಎಂಎ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ.ಪ್ರಭಾಚಂದ್ರ ಜೈನ್, ಡಾ.ಕೆ.ಆರ್.ಜೋಯಿಷಿ, ಡಾ.ಜಯಗೋಪಾಲ್ ತೊಳ್ಪಾಡಿ, ಡಾ.ಲೀಲಾ ಎಸ್.ಭಟ್ ಹಾಗೂ ಡಾ. ಪ್ರದೀಪ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ.ಮಹಾಬಲೇಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಅಧ್ಯಕ್ಷ ಡಾ.ಶಮಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಆಶೀಶ್ ಶರ್ಮ ವಂದಿಸಿದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಘಟಕದ ಕೋಶಾಧಿಕಾರಿ ಡಾ.ದಿಲೀಪ್ ಕುಮಾರ್ ಪ್ರತಿಜ್ಞಾವಿಧಿ ಹಾಗೂ ಧ್ವಜವಂದನೆ ನೆರವೇರಿಸಿದರು. ಡಾ.ಮೀನಾ ಕಿರಣ್ ಸನ್ಮಾನಿತರನ್ನು ಪರಿಚಯಿಸಿದರು.
ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ.ಯೋಗಾನಂದ ರೆಡ್ಡಿ, ಡಾ.ಹರೀಶ್ ದೇಲಂತಬೆಟ್ಟು, ಡಾ.ಮೋಹನ್ ಅಪ್ಪಾಜಿ, ಡಾ.ಅವಿನ್ ಆಳ್ವ, ಡಾ.ವೆಂಕಟಾಚಲಪತಿ, ಡಾ.ವಿನಯ ಆಳ್ವ, ವಿವೇಕ್ ಆಳ್ವ, ಡಾ.ಹನ ಶೆಟ್ಟಿ ಉಪಸ್ಥಿತರಿದ್ದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜತೆಗೆ ಸಂಸ್ಕೃತಿಗೂ ಆದ್ಯತೆ ನೀಡಿ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ. ಐಎಂಎ ಮೂಡುಬಿದಿರೆ ಘಟಕಕ್ಕೆ ಸೇರ್ಪಡೆಯಾದ 26 ವೈದ್ಯರ ಮೇಲೆ ಸಾವಿರಾರು ಜನರ ಆರೋಗ್ಯದ ಜವಾಬ್ದಾರಿ ಇದೆ.

— ಡಾ.ಯೋಗಾನಂದ ರೆಡ್ಡಿ, ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net