ಅಂಗವಿಕಲ ಬಾಲಕಿಗೆ ಲೈಂಗಿಕ ಕಿರುಕುಳ

pocso
pocso
Published on
ಕಾಸರಗೋಡು: ಹದಿನೇಳರ ಹರೆಯದ ಅಂಗವಿಕಲ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೇಕಲ ಠಾಣೆ ಪೊಲೀಸರು ಐವರ ವಿರುದ್ಧ ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದಾರೆ.
ವೆಲ್ಫೇರ್ ಸಮಿತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪಳ್ಳಿಕ್ಕೆರೆ ಪಂಚಾಯಿತಿ ವ್ಯಾಪ್ತಿಯ ಅಂಗವಿಕಲ ಬಾಲಕಿಗೆ ಆಟೋ ಚಾಲಕನೊಬ್ಬ ಕಿರುಕುಳ ನೀಡಿದ್ದು, ನಂತರ ಆತನ ಸ್ನೇಹಿತ ಸೇರಿದಂತೆ ಇತರ ನಾಲ್ಕು ಮಂದಿ ದೌರ್ಜನ್ಯ ಎಸಗಿದ್ದಾರೆ.

ಬಾಲಕಿ ನೀಡಿದ ಮಾಹಿತಿಯಂತೆ ಚೈಲ್ಡ್ ವೆಲ್ಫೇರ್ ಸಮಿತಿಗೆ ವಿಷಯ ತಿಳಿಸಲಾಗಿತ್ತು. ಸಮಿತಿ ನೇತೃತ್ವದಲ್ಲಿ ಇತ್ತೀಚೆಗೆ ಬಾಲಕಿಯನ್ನು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಕಿರುಕುಳ ನೀಡಿರುವುದು ತಿಳಿದುಬಂದಿದೆ. ಅದರಂತೆ ಬೇಕಲ ಠಾಣೆ ಪೊಲೀಸರು ಐವರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net