

ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಅಪರಾಧಿ ಬಾಳೆಹೊನ್ನೂರು ಬೀರಪ್ಪ ದೇವಸ್ಥಾನ ಸನಿಹದ ನಿವಾಸಿ ಹೇಲಪ್ಪ ಸುಬ್ಬಣ್ಣ ಹಿರೇಗಾರ (36) ಎಂಬಾತನಿಗೆ ಹೊಸದುರ್ಗ ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ. ಸುರೇಶ್ ಅವರು ಆರು ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ದಂಡ ಪಾವತಿಸದಿದ್ದಲ್ಲಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. 2025, ಜುಲೈ 16ರಂದು ಮೇಲ್ಪಂಬ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ದೂರಿನನ್ವಯ ಪೊಲೀಸರು ಹೇಲಪ್ಪ ಸುಬ್ಬಣ್ಣ ಹಿರೇಗಾರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಎಸ್‌ಐ ಎ.ಎನ್.ಸುರೇಶ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.