ಐವರು ಮಕ್ಕಳಲ್ಲಿ ಶಿಗೆಲ್ಲಾ ಸೋಂಕು ಪತ್ತೆ

ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರ
ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರ
Published on
ಕಾಸರಗೋಡು: ನೀಲೇಶ್ವರದ ಚಾತಮತ್‌ನಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಘಟನೆಯ ನಂತರ ನಡೆಸಿದ ತಪಾಸಣೆಯಲ್ಲಿ ಐವರು ಮಕ್ಕಳಿಗೆ ‘ಶಿಗೆಲ್ಲಾ’ ಸೋಂಕು ತಗಲಿರುವುದು ದೃಢಪಟ್ಟಿದೆ. ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಶಿಗೆಲ್ಲಾ ಸೋಂಕು ಪತ್ತೆಯಾಗಿರುವುದರಿಂದ ಈ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಮತ್ತು ಸೋಂಕು ತಡೆಗಟ್ಟುವ ಕ್ರಮ ತೀವ್ರಗೊಳಿಸಿದೆ.
ವಾರದ ಹಿಂದೆ, ಈ ಪ್ರದೇಶದಲ್ಲಿ ನಡೆದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಆಹಾರ ಸೇವಿಸಿದ ಬಳಿಕ ಅತಿಸಾರ ಕಾಣಿಸಿಕೊಂಡಿದ್ದು, ಮಕ್ಕಳು ಸೇರಿದಂತೆ ಒಟ್ಟು ಇಪ್ಪತ್ತೇಳು ಮಂದಿ ಚಿಕಿತ್ಸೆ ಪಡೆದಿದ್ದರು. ತೀವ್ರ ಅತಿಸಾರ, ಹೊಟ್ಟೆ ನೋವು, ವಾಕರಿಕೆ ಮತ್ತು ಜ್ವರ ಇದರ ಮುಖ್ಯ ಲಕ್ಷಣ. ತೀವ್ರ ಅತಿಸಾರವು ಮೂರು ದಿನಗಳಿಗಿಂತ ಹೆಚ್ಚು ಕಾಲ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸಬೇಕು. ಸೋಂಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net