ಜಗದ್ಗುರು ಆದಿ ಶಂಕರಾಚಾರ್ಯ ಮಹಾಸಂಸ್ಥಾನಂ ಶ್ರೀ ವಾಗೀಶ್ವರಿ ಲಕ್ಷ್ಮೀನೃಸಿಂಹ ಭಾಗವತ ಮಹಾಪೀಠಂ ಪುಣ್ಯಸಂಗಮ ಕ್ಷೇತ್ರ ಶ್ರೀ ಮಠ ಬಾಳೆಕುದ್ರು ಹಂಗಾರಕಟ್ಟೆ ಶ್ರೀ ವಾಸುದೇವ ಸದಾಶಿವಾಶ್ರಮ ಶ್ರೀಪಾದಂಗಳವರು, ಜಗದ್ಗುರು ಆದಿ ಶಂಕರಾಚಾರ್ಯ ಮಹಾಸಂಸ್ಥಾನಂ ಶ್ರೀಮದ್ ಎಡನೀರು ಮಠ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಧಾರ್ಮಿಕ ಮುಖಂಡರು, ಗಣ್ಯರು ಭಾಗವಹಿಸಲಿದ್ದಾರೆ. ಅಳ್ವೆಗದ್ದೆ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ ಎನ್.ಅಳ್ವೆಗದ್ದೆ, ದೇವಳದ ಅಧ್ಯಕ್ಷ ಗಣಪತಿ ಎಸ್.ಮೊಗವೀರ ಹಾಗೂ ಸಮಿತಿ ಸದಸ್ಯರು ಉತ್ಸವದ ತಯಾರಿಯಲ್ಲಿ ತೊಡಗಿದ್ದಾರೆ.