ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಶಿಕ್ಷಕರಾದ ಜಿ.ಪಿ ಪ್ರಭಾಕರ ತುಮರಿ ಉಪನ್ಯಾಸ ನೀಡಿ, ಹಡಪದ ಅಪ್ಪಣ್ಣರು ಸುಮಾರು 240 ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದು, ಅವುಗಳಲ್ಲಿ ಕಾಯಕ, ಆತ್ಮಶುದ್ಧಿ, ಶಿವಭಕ್ತಿ, ಸತ್ಯ, ನಿಷ್ಠೆ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಅತ್ಯಂತ ಸರಳ ಹಾಗೂ ಪರಿಣಾಮಕಾರಿಯಾಗಿ ಅಭಿವ್ಯಕ್ತಪಡಿಸಿದ್ದಾರೆ ಎಂದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ ವಂದಿಸಿದರು.