ಅಸಂಘಟಿತ ಕಾರ್ಮಿಕರಿಗೆ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಹೀಗಾಗಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಕಾರ್ಮಿಕರನ್ನು ಯೋಜನೆಯಡಿ ನೋಂದಾಯಿಸಲು ಜಿಲ್ಲೆಯಲ್ಲಿ ಈಗಾಗಲೇ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಮಾರ್ಚ್ 15 ರ ವರೆಗೆ ನಡೆಯಲಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ ಮೊದಲನೇ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಆದಾಯ ತೆರಿಗೆ ಪಾವತಿದಾರರು, ಸಂಘಟಿತ ವಲಯದ ಕಾರ್ಮಿಕರು, ಇ.ಎಸ್.ಐ, ಪಿ.ಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಿರುವುದಿಲ್ಲ ಎಂದರು.