ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಲ್ಒಗಳು ಪ್ರತಿಯೊಬ್ಬ ಮತದಾರರಿಗೂ ಪೂರ್ವ ಮುದ್ರಿತ ವಿವರಗಳಿರುವ ಗಣತಿ ನಮೂನೆಯನ್ನು ದ್ವಿಪ್ರತಿಯಲ್ಲಿ ವಿತರಿಸಿ, ಭರ್ತಿ ಮಾಡಲು ಮಾರ್ಗದರ್ಶನ ನೀಡಲಿದ್ದಾರೆ. ಗಣತಿ ಸಮಯದಲ್ಲಿ ಮನೆಗೆ ಬೀಗ ಹಾಕಿದ್ದರೆ ಬಿಎಲ್ಒಗಳು ಕನಿಷ್ಠ 3 ಬಾರಿ ಭೇಟಿ ನೀಡುವುದು ಕಡ್ಡಾಯವಾಗಿದೆ. ಆದಾಗ್ಯೂ ಸಂಪರ್ಕಕ್ಕೆ ಸಿಗದ ಮತದಾರರನ್ನು 'ಗೈರುಹಾಜರಿ, ಸ್ಥಳಾಂತರ, ಮರಣ, ನಕಲು' ಎಂದು ಪಟ್ಟಿ ಮಾಡಿ ತಾಲೂಕು ಹಾಗೂ ಪಂಚಾಯಿತಿ ಕಚೇರಿಗಳಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು. ಇವರನ್ನು ಕರಡು ಪಟ್ಟಿಗೆ ಸೇರಿಸಲಾಗುವುದಿಲ್ಲ ಎಂದು ಹೇಳಿದರು.