ಜಬ್ಬಾರ್ ಹುಸೈನ್ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಈತನ ವಿರುದ್ಧ ಉಡುಪಿ. ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರ ನಗರದಲ್ಲಿ ಇದುವರೆಗೆ ಒಟ್ಟು 16 ಪ್ರಕರಣ ದಾಖಲಾಗಿದೆ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಸಂದೇಶ್ ನಾಯ್ಕ್ ವಿರುದ್ಧ ಐದು ಪ್ರಕರಣ ದಾಖಲಾಗಿದ್ದು, ರೌಡಿ ಶೀಟ್ ತೆರೆಯಲಾಗಿದೆ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಸುಶಾಂತ್ ಪೂಜಾರಿ ವಿರುದ್ಧ ಮೂರು ಪ್ರಕರಣ ದಾಖಲಾಗಿದೆ.