ಸಮಸ್ಯೆ ಪರಿಹಾರಕ್ಕೆ ವಿಶೇಷ ಕಾಳಜಿ

 ಹೆಮ್ಮಾಡಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯ ಕುರಿತು ವಾಹಿತಿ ಕಾರ್ಯಾಗಾರವನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಉಪಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ., ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಮತ್ತಿತರರಿದ್ದರು.
ಹೆಮ್ಮಾಡಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯ ಕುರಿತು ವಾಹಿತಿ ಕಾರ್ಯಾಗಾರವನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಉಪಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ., ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಮತ್ತಿತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಅರಣ್ಯ ಪ್ರದೇಶಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದು, ರಸ್ತೆ, ಶಾಲೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ತೊಡಕಾಗುತ್ತಿದೆ. ನಮ್ಮ ಗ್ರಾಮದ ನಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಪರಿಹಾರಕೊಳ್ಳುವಲ್ಲಿ ವಿಶೇಷ ಕಾಳಜಿಯನ್ನು ಅಧಿಕಾರಿಗಳು ತೋರಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ಮತ್ತು ಬೈಂದೂರು ತಾಲೂಕು ವ್ಯಾಪ್ತಿಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆವ್ಮಾಡಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ಕುರಿತು ಬುಧವಾರ ಜರುಗಿದ ವಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ., ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಮಾತನಾಡಿದರು.
ಸಾಮಾಜಿಕ ಅರಣ್ಯ ಇಲಾಖೆ ಉಪಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್., ಕುಂದಾಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ ಪೂಜಾರಿ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಬೈಂದೂರು ತಹಸೀಲ್ದಾರ್ ರಾಮಚಂದ್ರಪ್ಪ, ಕುಂದಾಪುರ ತಾ.ಪಂ. ಇಒ ಮಹೇಶ ಕೆ.ಜಿ., ಬೈಂದೂರು ತಾ.ಪಂ. ಇಒ ರಾಮದಾಸ, ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಂ.ನಾಯ್ಕ ಉಪಸ್ಥಿತರಿದ್ದರು. ಯೋಜನಾ ಅಧಿಕಾರಿ ಸತೀಶ್ ಸ್ವಾಗತಿಸಿದರು. ಸುಮಾ ಸಂಗ್ರಾಮ್ ವಂದಿಸಿದರು.

ಅರಣ್ಯ ಸಂಪತ್ತು ರಕ್ಷಣೆ ಎಷ್ಟು ಮುಖ್ಯವೋ ನೂರಾರು ವರ್ಷಗಳಿಂದ ಅರಣ್ಯ ಪ್ರದೇಶವನ್ನು ಅವಲಂಬಿಸಿ ಜೀವನ ನಡೆಸುತ್ತಿರುವ ಜನರ ಬದುಕು ಕೂಡ ಅಷ್ಟೇ ಮುಖ್ಯ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾನೂನುಗಳನ್ನು ಪಾಲಿಸಬೇಕಾದುದು ಎಲ್ಲರ ಕರ್ತವ್ಯ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net