ಉಡುಪಿ: ನ್ಯಾಯಾಲಯವು ಪೋಕ್ಸೋ ಪ್ರಕರಣದ ವಿಚಾರಣೆಯ ವೇಳೆ ಗಂಭೀರತೆ ಅರಿತು ಸಂತ್ರಸ್ಥೆಯರಿಗೆ ತೀರ್ಪಿನಲ್ಲಿ ಪರಿಹಾರವನ್ನೂ ಆದೇಶಿಸುತ್ತದೆ. ಅವರ ಮುಂದಿನ ಜೀವನಕ್ಕೆ ಸಹಕಾರಿಯಾಗುವಂತೆ, ಸಮಾಜದಲ್ಲಿ ಉತ್ತಮ ಜೀವನ ಕಟ್ಟಿಕೊಳ್ಳಲು ಪರಿಹಾರವನ್ನು ನಿರ್ಧರಿಸಲಾಗುತ್ತದೆ. ಅಲ್ಲದೆ, ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ ಮಾಹಿತಿ ನೀಡಿದರು.