ಸ್ವಾತಂತ್ರ್ಯ ಸಂಗ್ರಾಮಕ್ಕೆ ಸ್ಫೂರ್ತಿಯಾಗಿದ್ದ ವಿವೇಕಾನಂದ

ಉಡುಪಿಯ ತೆಂಕನಿಡಿಯೂರು ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜಿ ಮಾತನಾಡಿದರು. ಪ್ರೊ. ನಿತ್ಯಾನಂದ್​ ವಿ. ಗಾಂವ್ಕರ್​, ಡಾ.ಚಂದ್ರು ಹೆಗಡೆ, ಪ್ರಶಾಂತ್​ ನೀಲಾವರ ಇದ್ದರು.
ಉಡುಪಿಯ ತೆಂಕನಿಡಿಯೂರು ಕಾಲೇಜಿನಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜಿ ಮಾತನಾಡಿದರು. ಪ್ರೊ. ನಿತ್ಯಾನಂದ್​ ವಿ. ಗಾಂವ್ಕರ್​, ಡಾ.ಚಂದ್ರು ಹೆಗಡೆ, ಪ್ರಶಾಂತ್​ ನೀಲಾವರ ಇದ್ದರು.
Published on

* ಕಡಪದ ರಾಮಕೃಷ್ಣ ಮಿಷನ್​ನ ಸ್ವಾಮಿ ಅನುಪಮಾನಂದಜಿ ಮಾಹಿತಿ 

* ತೆಂಕನಿಡಿಯೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸ

ಉಡುಪಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾಮಿ ವಿವೇಕಾನಂದರು ಆಧ್ಯಾತ್ಮಿಕ ಸಂಘಟನೆಗೆ ಸ್ಫೂರ್ತಿಯಾಗಿದ್ದರು. 'ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಅವರ ವಾಣಿಯು ರಾಷ್ಟ್ರೀಯವಾದಿಗಳಲ್ಲಿ ನಿರ್ಭೀತ ನಡೆಗೆ ಕಾರಣವಾಯಿತು. ತಿಲಕ್​, ಅರವಿಂದ್​ ಘೋಷ್​, ಮಹಾತ್ಮ ಗಾಂಧಿ, ಭಗತ್​ಸಿಂಗ್​ ಮುಂತಾದ ಅನೇಕ ಹೋರಾಟಗಾರರು ವಿವೇಕಾನಂದರ ಚಿಂತನೆಗಳಿಂದ ಪ್ರೇರಿತರಾಗಿದ್ದರು ಎಂದು ಕಡಪದ ರಾಮಕೃಷ್ಣ ಮಿಷನ್​ನ ಮುಖ್ಯಸ್ಥ ಸ್ವಾಮಿ ಅನುಪಮಾನಂದಜಿ ತಿಳಿಸಿದರು.
ಉಡುಪಿಯ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಹಕಾರದಲ್ಲಿ ಆಯೋಜಿಸಿದ್ದ 'ಸ್ವಾಮಿ ವಿವೇಕಾನಂದರು: ಭಾರತದ ಸ್ವಾತಂತ್ರ್ಯ ಚಳವಳಿಯ ಸ್ಫೂರ್ತಿದಾಯಕ ಶಕ್ತಿ' ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ್​ ವಿ. ಗಾಂವ್ಕರ್​ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ.ಜಯಮಂಗಳಾ, ಗ್ರಂಥ ಪಾಲಕ ಕೃಷ್ಣ ಸಾಸ್ತಾನ, ಕನ್ನಡ ಸಹಾಯಕ ಪ್ರಾಧ್ಯಾಪಕ ಮಾರುತಿ, ಸಂಖ್ಯಾಶಾಸ್ತ್ರ ಪ್ರಾಧ್ಯಾಪಕ ಉಮೇಶ್​ ಪೈ, ರಾಜ್ಯಶಾಸ್ತ್ರ ಉಪನ್ಯಾಸಕಿ ಆರತಿ ಜಿ., ಇತಿಹಾಸ ಉಪನ್ಯಾಸಕಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಚಂದ್ರು ಹೆಗಡೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಘು ನಾಯ್ಕ್​ ವಂದಿಸಿದರು. ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್​ ನೀಲಾವರ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net