ಹರ್​ ಘರ್​ ತಿರಂಗಾದೊಂದಿಗೆ ಸಂಭ್ರಮಿಸೋಣ

ಉಡುಪಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಸಭೆಯನ್ನು ಕುತ್ಯಾರು ನವೀನ್​ ಶೆಟ್ಟಿ ಉದ್ಘಾಟಿಸಿದರು. ಶ್ರೀಕಾಂತ್​ ನಾಯಕ್​, ದಿನಕರ್​ ಶೆಟ್ಟಿ ಹೆರ್ಗ, ರೇಶ್ಮಾ ಉದಯ್​ ಶೆಟ್ಟಿ ಇದ್ದರು.
ಉಡುಪಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಸಭೆಯನ್ನು ಕುತ್ಯಾರು ನವೀನ್​ ಶೆಟ್ಟಿ ಉದ್ಘಾಟಿಸಿದರು. ಶ್ರೀಕಾಂತ್​ ನಾಯಕ್​, ದಿನಕರ್​ ಶೆಟ್ಟಿ ಹೆರ್ಗ, ರೇಶ್ಮಾ ಉದಯ್​ ಶೆಟ್ಟಿ ಇದ್ದರು.
Published on

* ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ ಕರೆ

* ಜಿಲ್ಲಾ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ 

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ 80ನೇ ಸ್ವಾತಂತ್ರ್ಯ ದಿನವನ್ನು 'ಹರ್​ ಘರ್​ ತಿರಂಗಾ' ಅಭಿಯಾನದಡಿ ಪ್ರತಿಯೊಬ್ಬರೂ ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸೋಣ. ಜಿಲ್ಲಾದ್ಯಂತ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ ಕರೆ ನೀಡಿದರು.
ಉಡುಪಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿ, ದೇಶಾದ್ಯಂತ ಆ.13ರಿಂದಲೇ ಹರ್​ ಘರ್​ ತಿರಂಗಾ ಅಭಿಯಾನ ಚಾಲ್ತಿಯಲ್ಲಿದೆ ಎಂದರು.

ಸರಣಿ ಪ್ರತಿಭಟನೆ

ಪಕ್ಷದ ಸೂಚನೆಯಂತೆ ಜಿಲ್ಲಾದ್ಯಂತ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 'ತಿರಂಗಾ ಯಾತ್ರೆ' ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಆ.15ರಂದು ಜಿಲ್ಲೆ ಹಾಗೂ ಮಂಡಲ ಕಚೇರಿಗಳಲ್ಲಿ  ಧ್ವಜಾರೋಹಣ ನೆರವೇರಲಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ರಾಜ್ಯಾದ್ಯಂತ ಸರಣಿ ಪ್ರತಿಭಟನೆ ನಡೆಲಿದ್ದು, ಉಡುಪಿ ಜಿಲ್ಲಾ ಕೇಂದ್ರದಲ್ಲಿಯೂ ಆಯೋಜಿಸಲಾಗಿದೆ ಎಂದರು.
ತಿಂಗಳ ಪ್ರತಿ ವಾರದಲ್ಲಿ ಕ್ರಮವಾಗಿ ಮಂಡಲ, ಜಿಲ್ಲೆ, ಶಕ್ತಿ ಕೇಂದ್ರ ಹಾಗೂ ಬೂತ್​ ಸಮಿತಿಗಳ ಸಂಘಟನಾತ್ಮಕ ಸಭೆ ನಡೆಯಲಿದೆ. ವಿವಿಧ ಸ್ತರದ ಪದಾಧಿಕಾರಿಗಳು, ಸಮಿತಿ ಹಾಗೂ ಕಾರ್ಯಕಾರಿಣಿ ಸದಸ್ಯರು ಪಕ್ಷದ ಎಲ್ಲ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕುತ್ಯಾರು ನವೀನ್​ ಶೆಟ್ಟಿ ಸಲಹೆ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್​ ನಾಯಕ್​ ಮಾತನಾಡಿ, ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ನೂತನ ಕಾರ್ಯಕಾರಿಣಿ ಸದಸ್ಯರ ಪರಿಚಯ ವರ್ಗ ನಡೆಯಿತು. ಮಂಡಲವಾರು ಚಟುವಟಿಕೆಗಳ ವರದಿ ಮಂಡಿಸಲಾಯಿತು.
ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್​ ಶೆಟ್ಟಿ ಹೆರ್ಗ ಸ್ವಾಗತಿಸಿದರು. ರೇಶ್ಮಾ ಉದಯ್​ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಉಮೇಶ್​ ನಾಯ್ಕ್​ ಚೇರ್ಕಾಡಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net