ಮಕ್ಕಳ ಮಾನಸಿಕ ಸದೃಢತೆಗೆ ಕ್ರೀಡೆ ಆಧಾರಸ್ತಂಭ

 ಖೋ-ಖೋ ಪಂದ್ಯಾಟವನ್ನು ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಉದ್ಘಾಟಿಸಿದರು. ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ., ಪ್ರಮುಖರಾದ ಸುಜಯಾ, ನಂದಾ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
ಖೋ-ಖೋ ಪಂದ್ಯಾಟವನ್ನು ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಉದ್ಘಾಟಿಸಿದರು. ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ., ಪ್ರಮುಖರಾದ ಸುಜಯಾ, ನಂದಾ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.
Published on
ಸುಬ್ರಹ್ಮಣ್ಯ: ಎಳವೆಯಲ್ಲಿಯೇ ಮಕ್ಕಳು ಕ್ರೀಡಾ ಕ್ಷೇತ್ರದತ್ತ ಆಕರ್ಷಿತರಾಗುವಂತೆ ಮಾಡಬೇಕು. ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢತೆಗೆ ಆಧಾರಸ್ತಂಭವಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವುದರಿಂದ ಬದುಕು ಉಜ್ವಲವಾಗುತ್ತದೆ ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದರು.
ದ.ಕ. ಜಿಪಂ, ಶಾಲಾ ಶಿಕ್ಷಣ ಇಲಾಖೆ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸುಬ್ರಹ್ಮಣ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಎಸ್‌ಎಸ್‌ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ 14ರ ವಯೋಮಾನದ ತಾಲೂಕುಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಸುಬ್ರಹ್ಮಣ್ಯ ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಷ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ ಡಿ., ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯಾ, ಪಿಯು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಪ್ರೌಢಶಾಲೆ ಮುಖ್ಯಶಿಕ್ಷಕಿ ನಂದಾ ಹರೀಶ್ ಮುಖ್ಯ ಅತಿಥಿಗಳಾಗಿದ್ದರು.
ಎಸ್‌ಡಿಎಂಸಿ ಉಪಾಧ್ಯಕ್ಷೆ ನಳಿನಾಕ್ಷಿ, ಸುಬ್ರಹ್ಮಣ್ಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಅಂಬಿಕಾ ಜಗಜೀವನ್, ದೈಹಿಕ ಶಿಕ್ಷಣ ಶಿಕ್ಷಕಿಯರಾದ ಸವಿತಾ ಶೆಟ್ಟಿ, ಸ್ಮಿತಾ ಉಪಸ್ಥಿತರಿದ್ದರು. ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ. ಕ್ರೀಡಾಂಗಣ ಉದ್ಘಾಟಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net