ತಾಂತ್ರಿಕ ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಮಹತ್ವ

ನಿಟ್ಟೆಯಲ್ಲಿ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮವನ್ನು ಡಾ.ಶಾಂತರಾಮ್ ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಡಾ.ಎಂ.ಎಸ್.ಮೂಡಿತ್ತಾಯ, ಪ್ರೊ.ಡಾ.ಗೋಪಾಲ್ ಮುಗೇರಾಯ, ಡಾ.ಹರ್ಷ ಹಾಲಹಳ್ಳಿ, ಡಾ.ಪ್ರಸಾದ್ ಬಿ.ಶೆಟ್ಟಿ ಉಪಸ್ಥಿತರಿದ್ದರು.
ನಿಟ್ಟೆಯಲ್ಲಿ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮವನ್ನು ಡಾ.ಶಾಂತರಾಮ್ ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಡಾ.ಎಂ.ಎಸ್.ಮೂಡಿತ್ತಾಯ, ಪ್ರೊ.ಡಾ.ಗೋಪಾಲ್ ಮುಗೇರಾಯ, ಡಾ.ಹರ್ಷ ಹಾಲಹಳ್ಳಿ, ಡಾ.ಪ್ರಸಾದ್ ಬಿ.ಶೆಟ್ಟಿ ಉಪಸ್ಥಿತರಿದ್ದರು.
Published on
ಕಾರ್ಕಳ: ಇಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಂಡು ಉದ್ಯೋಗಾವಕಾಶ ಹೆಚ್ಚಿಸಿಕೊಳ್ಳಬೇಕು. ನಿಟ್ಟೆ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಈ ದೃಷ್ಟಿಯಲ್ಲಿ ಸಜ್ಜುಗೊಳಿಸಲು ಸದಾ ಕಾರ್ಯ ಪ್ರವೃತ್ತವಾಗಿರುತ್ತದೆ. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿ ವೃದ್ಧಿಯ ಹಿನ್ನೆಲೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಷಯಗಳಿಗೂ ಸಮಾನ ಮಹತ್ವ ನೀಡುವುದು ಮುಖ್ಯ ಎಂದು ನಿಟ್ಟೆ ಪರಿಗಣಿತ ವಿವಿ ಪ್ರೊ-ಚಾನ್ಸಲರ್ ಡಾ.ಶಾಂತರಾಮ್ ಶೆಟ್ಟಿ ಹೇಳಿದರು.
ನಿಟ್ಟೆಯ ನೂತನ ಆಂಫಿಥಿಯೇಟರ್‌ನಲ್ಲಿ ಸೋಮವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್‌ಗಳಿಗೆ 2026ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಟ್ಟೆ ಪರಿಗಣಿತ ವಿವಿ ವೈಸ್-ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಅಣಿಗೊಳ್ಳಬೇಕು ಎಂಬುದನ್ನು ವಿವರಿಸಿದರು. ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ, ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿಯ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ವಿವರಿಸಿದರು. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಮ್ಯಾಗಜಿನ್ ನಿದರ್ಶನ್- 2026 ಬಿಡುಗಡೆಗೊಳಿಸಲಾಯಿತು.
ನಿಟ್ಟೆ ಪರಿಗಣಿತ ವಿವಿ ಕುಲಸಚಿವ ಡಾ.ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಡಾ.ಪ್ರಸಾದ್ ಬಿ.ಶೆಟ್ಟಿ ಉಪಸ್ಥಿತರಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಸ್ವಾಗತಿಸಿದರು. ಪ್ರಥಮ ವರ್ಷ ಬಿಟೆಕ್ ವಿದ್ಯಾರ್ಥಿಗಳ ಸಂಯೋಜಕ ಹಾಗೂ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮ ಸಂಯೋಜಕ ಡಾ.ಜಾಯ್ ಮಾರ್ಟಿಸ್ ವಂದಿಸಿದರು. ಎಂಸಿಎ ವಿಭಾಗದ ಸಹ ಪ್ರಾಧ್ಯಾಪಕಿ ಪ್ರೇಮಿತಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net