ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ವಾರ್ಷಿಕ ಕ್ರೀಡಾಕೂಟ ನಡೆಯಿತು.
Published on:
Copied
Follow Us
ಕುಂದಾಪುರ:ಕ್ರೀಡೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಆರೋಗ್ಯಕರ ದೇಹ ಮತ್ತು ಮನಸ್ಸಿನ ಬೆಳವಣಿಗೆಗೆ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳ ಪೂರ್ಣ ಪ್ರವಾಣದ ಸ್ವಾಸ್ಥ್ಯಕ್ಕೆ ಕ್ರೀಡೆ ಅವಶ್ಯಕ. ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಕ್ರೀಡಾ ಚಟುವಟಿಕೆಗೆ ಮೀಸಲಿಡಬೇಕು ಎಂದು ಹಳೇ ವಿದ್ಯಾರ್ಥಿ ಡಾ.ಮೊಹಮ್ಮದ್ ಆಸಿಫ್ ಬ್ಯಾರಿ ಅಭಿಪ್ರಾಯಪಟ್ಟರು.
ಗುರುವಾರ ನಡೆದ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢ ಮತ್ತು ಪದವಿ ಪೂರ್ವ ವಿಭಾಗದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕೆಪಿಎಸ್‌ನ ಪ್ರೌಢ ವಿಭಾಗದ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಉಡುಪ ಕ್ರೀಡಾ ಜ್ಯೋತಿ ಬೆಳಗಿಸಿದರು. ಕೋಟೇಶ್ವರ ಪಂಚಾಯಿತಿ ಅಧ್ಯಕ್ಷೆ ರಾಗಿಣಿ ದೇವಾಡಿಗ ಧ್ವಜಾರೋಹಣಗೈದರು.
ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ಐವರು ವಿದ್ಯಾರ್ಥಿಗಳನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಹೊಳ್ಳ ಅವರು ವೈಯಕ್ತಿಕ ನಗದು ಪುರಸ್ಕಾರ ನೀಡಿ ಗೌರವಿಸಿದರು.
ಗ್ರಾಪಂ. ಸದಸ್ಯ ನಾಗರಾಜ್ ಎಂ.ಕಾಂಚನ್, ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಸದಸ್ಯ ಅಶೋಕ್, ಪ್ರೌಢ ವಿಭಾಗದ ಎಸ್‌ಡಿಎಂಸಿ ಸದಸ್ಯ ಸಿದ್ದಿಕ್ ಮತ್ತು ಕುವಾರಸ್ವಾಮಿ ಜೋಗಿ ಉಪಸ್ಥಿತರಿದ್ದರು.
ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ವಂದಿಸಿದರು. ಗಣೇಶ ಹೆಬ್ಬಾರ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ.ಸಹಕರಿಸಿದರು.