ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಗೆ ಕ್ರೀಡೆ ಸಹಕಾರಿ

ಹೆಬ್ರಿ ವೃತ್ತಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟ ಅಮೃತ ಭಾರತಿ ಕ್ರೀಡಾಂಗಣದಲ್ಲಿ ನಡೆಯಿತು.
ಹೆಬ್ರಿ ವೃತ್ತಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟ ಅಮೃತ ಭಾರತಿ ಕ್ರೀಡಾಂಗಣದಲ್ಲಿ ನಡೆಯಿತು.
Published on
ವಿಜಯವಾಣಿ ಸುದ್ದಿಜಾಲ ಹೆಬ್ರಿ
ಕ್ರೀಡೆ ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಗೆ ಸಹಕಾರಿ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೆಬ್ರಿ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ್ ಶೇರಿಗಾರ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ ವತಿಯಿಂದ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಮೃತ ಭಾರತಿ ಕ್ರೀಡಾಂಗಣದಲ್ಲಿ ಹೆಬ್ರಿ ವೃತ್ತಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಸದಸ್ಯ ಬಾಲಕೃಷ್ಣ ಮಲ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಅಮೃತ ಭಾರತಿ ಪಠ್ಯ ಪೂರಕ ಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದರು.
ಅಮೃತ ಭಾರತಿ ಟ್ರಸ್ಟ್ ವಿಶ್ವಸ್ಥರಾದ ಭಾಸ್ಕರ್ ಜೋಯಿಸ್ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಹೆಬ್ರಿ ಗ್ರಾಪಂ ಸದಸ್ಯೆ ಆಶಾಲತಾ ಧ್ವಜಾರೋಹಣಗೈದರು. ಹೆಬ್ರಿ ಗ್ರಾಪಂ ಉಪಾಧ್ಯಕ್ಷೆ ಸುಪ್ರಿಯಾ ಕ್ರೀಡಾ ಜ್ಯೋತಿ ಉದ್ಘಾಟಿಸಿದರು. ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಹೆಬ್ರಿ ಗ್ರಾಪಂ ಸದಸ್ಯೆ ರೇವತಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಕಾರ್ಕಳ ತಾಲೂಕು ಶಿಕ್ಷಕರ ಸಂಘ ಅಧ್ಯಕ್ಷ ರಮಾನಂದ ಶೆಟ್ಟಿ, ಹೆಬ್ರಿ ವೃತ್ತದ ಸಿ.ಆರ್.ಪಿ ಪುಷ್ಪ, ಶಿವಪುರ ಕ್ಲಸ್ಟರ್ ಸಿ.ಆರ್.ಪಿ ಪ್ರೀತೇಶ್ ಶೆಟ್ಟಿ, ಸಂಸ್ಥೆ ಮುಖ್ಯಸ್ಥರಾದ ಶಕುಂತಲಾ, ಅಪರ್ಣ ಆಚಾರ್, ಪ್ರಕಾಶ್ ಜೋಗಿ, ಅರುಣ್, ಅನಿತಾ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕಿ ಶಕುಂತಳಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net