ದಿವಾನ್ ಡಾ. ಉದಯ್ ಸರಳತ್ತಾಯ ಮಾತನಾಡಿ, ವಿಟ್ಲಪಿಂಡಿ ಉತ್ಸವದ ಅಂಗವಾಗಿ ರಾಜಾಂಗಣದಲ್ಲಿ ಸೆ.4ರಂದು 9 ರಿಂದ ಸಂಜೆ 5 ರವರೆಗೆ ಹಾಗೂ ಸೆ. 5ರಂದು ಸಂಜೆ 5ರಿಂದ ಹುಲಿ ವೇಷ ಹಾಗೂ ಜಾನಪದ ನೃತ್ಯ ಸ್ಪರ್ಧೆ ಹುಲಿವೇಷ ಸ್ಪರ್ಧೆ ನಡೆಯಲಿದೆ. ವಿಜೇತ ತಂಡಕ್ಕೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಸೆ. 6ರಂದು ಬೆಳಗ್ಗೆ ಕೋಟಿ ತುಳಸಿ ಅರ್ಚನೆ, ಸಾಯಂಕಾಲ 5 ಗಂಟೆಗೆ ರಾಜಾಂಗಣದಲ್ಲಿ ಅಷ್ಟಮಿ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.