ಉಡುಪಿ: ನಾವೆಲ್ಲರೂ ಕಂಪ್ಯೂಟರ್ ಯುಗದಲ್ಲಿದ್ದೇವೆ. ಇಂತಹ ಸಂದರ್ಭದಲ್ಲೂ ವಿದ್ಯಾರ್ಥಿಗಳು ಚೆಸ್‌ನಂತಹ ಬೌದ್ಧಿಕ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಈ ಕ್ರೀಡೆಯಿಂದ ಏಕಾಗ್ರತೆ ಹಾಗೂ ಚಿಂತನಾ ಸಾಮರ್ಥ್ಯ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳ ಬೆಳವಣಿಗೆಗೆ ಹೆತ್ತವರು ಸಮಯ ಮೀಸಲಿಟ್ಟು ಪ್ರೋತ್ಸಾಹ ನೀಡುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ವಕೀಲ ರಾಘವೇಂದ್ರ ವೈ.ಟಿ. ಹೇಳಿದರು.