ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಕಠಿಣ ಪರಿಶ್ರಮವೇ ಕಾರಣ

ಉಡುಪಿಯ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಯಶ್​ಪಾಲ್​ ಸುವರ್ಣ, ಡಾ. ಅಶೋಕ್​ ಕಾಮತ್​, ಡಾ, ಯಲ್ಲಮ್ಮ, ಉಮಾ, ನಿರುಪಮಾ ಶೆಟ್ಟಿ, ಜಗದೀಶ್​, ಇಂದಿರಾ ಇತರರಿದ್ದರು.
ಉಡುಪಿಯ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ಯಶ್​ಪಾಲ್​ ಸುವರ್ಣ, ಡಾ. ಅಶೋಕ್​ ಕಾಮತ್​, ಡಾ, ಯಲ್ಲಮ್ಮ, ಉಮಾ, ನಿರುಪಮಾ ಶೆಟ್ಟಿ, ಜಗದೀಶ್​, ಇಂದಿರಾ ಇತರರಿದ್ದರು.
Published on

* ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮೆಚ್ಚುಗೆ 

* ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷಾ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲೆಯು ಎಸ್​ಎಸ್​ಎಲ್​ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಹಲವಾರು ವರ್ಷದಿಂದ ರಾಜ್ಯದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಗಳಿಸುತ್ತಲೇ ಇದೆ. ಈ ಶೈಕ್ಷಣಿಕ ಸಾಧನೆಯ ಹಿಂದೆ ಹಾಗೂ ನಮ್ಮ ಜಿಲ್ಲೆಗೆ ಕೀರ್ತಿ ತರುವಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರ ಕಠಿಣ ಪರಿಶ್ರಮದ ಕೊಡುಗೆಯೇ ಕಾರಣವಾಗಿದೆ ಎಂದು ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕರು,  ಪ್ರಾಂಶುಪಾಲರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪ್ರತಿನಿಧಿಗಳಿಗೆ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಾರ್ಯಾಗಾರದಲ್ಲಿ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮಾತನಾಡಿದರು.
ಅಗತ್ಯ ಮುತುವರ್ಜಿ ವಹಿಸಿ
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್​ ಕಾಮತ್​ ಮಾತನಾಡಿ, ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇವೆ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಶಿಕ್ಷಕರು ಪ್ರತಿ ವಿದ್ಯಾರ್ಥಿಗಳ ಬಗ್ಗೆ ವೈಯುಕ್ತಿಕ ಗಮನ ಹರಿಸಬೇಕು. ಪಾಲಕರೊಂದಿಗೆ ಸಮಾಲೋಚಿಸಿ ಮನೆಯಲ್ಲಿಯೂ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸಲು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಯಲ್ಲಮ್ಮ ಹಾಗೂ ಉಮಾ, ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಅಗತ್ಯ ಮಾಹಿತಿ, ಪೂರಕ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯೆ ನಿರುಪಮಾ ಪ್ರಸಾದ್​ ಶೆಟ್ಟಿ, ಪ್ರಾಂಶುಪಾಲ ಜಗದೀಶ್​, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿನ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
"

ಉಡುಪಿಯ ಶಾಸಕನಾದ ಬಳಿಕ 3 ವರ್ಷದಿಂದ ಕ್ಷೇತ್ರದಲ್ಲಿ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಪೂರ್ವ ಸಿದ್ಧತಾ ಕಾರ್ಯಾಗಾರ ಆಯೋಜಿಸುತ್ತಿದ್ದೇನೆ. ಇದು ಉತ್ತಮ ಫಲಿತಾಂಶಕ್ಕೂ ಸಹಕಾರಿಯಾಗುತ್ತಿದೆ. ಈ ವರ್ಷವೂ ಸಹ ಉಡುಪಿ ಜಿಲ್ಲೆಯೇ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಂತಾಗಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net