ಎಸ್ಸೆಸ್ಸೆಲ್ಸಿ, ಪಿಯುಸಿ ಜೀವನದ ಬಹು ಮುಖ್ಯ ಘಟ್ಟ

ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪ್ರಮುಖರಾದ ಜಿ.ವೆಂಕಟೇಶ ಶೆಣೈ, ಡಾ.ಕಾಶೀನಾಥ ಪೈ, ಎಚ್.ಗಣೇಶ ಕಾಮತ್ ಮೊದಲಾದವರಿದ್ದರು.
ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪ್ರಮುಖರಾದ ಜಿ.ವೆಂಕಟೇಶ ಶೆಣೈ, ಡಾ.ಕಾಶೀನಾಥ ಪೈ, ಎಚ್.ಗಣೇಶ ಕಾಮತ್ ಮೊದಲಾದವರಿದ್ದರು.
Published on
ಕುಂದಾಪುರ: ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಜೀವನದ ಬಹು ಮುಖ್ಯವಾದ ಘಟ್ಟ. ಈ ಸಂದರ್ಭದಲ್ಲಿ ತೆಗೆದುಕೊಳ್ಳುವ ನಿರ್ಧಾರ ಜೀವನದ ಮುಂದಿನ ಹಾದಿಯನ್ನು ನಿರ್ಧರಿಸುತ್ತದೆ ಎಂದು ಗಂಗೊಳ್ಳಿ ಉದ್ಯಮಿ ಜಿ.ವೆಂಕಟೇಶ ಶೆಣೈ ಹೇಳಿದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ, ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ವತಿಯಿಂದ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಖಜಾಂಚಿ ಎನ್.ಅಶ್ವಿನ್ ನಾಯಕ್ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಕವಿತಾ ಎಂ.ಸಿ. ಸ್ವಾಗತಿಸಿದರು. ಸಂಚಾಲಕ ಎನ್.ಸದಾಶಿವ ನಾಯಕ್ ಪ್ರಸ್ತಾವನೆಗೈದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಅತಿಥಿಗಳನ್ನು ಗೌರವಿಸಿದರು. ಉಪನ್ಯಾಸಕರಾದ ಪವಿತ್ರಾ, ಪ್ರುಲ್ಲಾ ಹಾಗೂ ಶಿಕ್ಷಕರಾದ ಸುಜಾತಾ ಮತ್ತು ಆದಿನಾಥ ಕಿಣಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ನಿರೂಪಿಸಿದರು. ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕ ರಾವೇಂದ್ರ ಶೇರುಗಾರ್ ವಂದಿಸಿದರು.

ಸಾಧಕರಿಗೆ ಸನ್ಮಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ‌್ಯಾಂಕ್ ಪಡೆದ ಗೌತಮಿ ಜಿ.ನಾಯಕ್, ಧನ್ಯ ಪೂಜಾರಿ, ಸಿಂಧು ಖಾರ್ವಿ, ನವ್ಯಶ್ರೀ ಕೆ., ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದ ಶ್ರೀನಿವಾಸ ವಿ.ಪೈ, ಅತ್ಯುತ್ತಮ ಸಾಧನೆ ವಾಡಿದ ಶ್ರೇಜಸ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತೀಕ ಕೊಠಾರಿ ಮತ್ತು ನವ್ಯಶ್ರೀ ಕೆ. ಅವರಿಗೆ ಕುಂದಾಪುರ ಡಾ.ಉಮೇಶ ಪುತ್ರನ್ ನೀಡಿದ ತಲಾ 25 ಸಾವಿರ ರೂ. ಮತ್ತು ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗೌತಮಿ ಜಿ.ನಾಯಕ್, ಸಿಂಚನಾ, ವಾನ್ಯಾ ಖಾರ್ವಿ ಅವರಿಗೆ ನಗರ ಕೃಷ್ಣಾನಂದ ನಾಯಕ್ ನೀಡಿದ ತಲಾ 5 ಸಾವಿರ ರೂ. ನೀಡಿ ಗೌರವಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತು ವಿಷಯವಾರು ಶೇ.100 ಅಂಕ ಪಡೆದ ವಿಷಯ ಶಿಕ್ಷಕರನ್ನು ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net