ಡಾ. ಕಾರಂತ ಜನ್ಮದಿನಾಚರಣೆ; ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಡಾ. ಶಿವರಾಮ ಕಾರಂತ.
ಡಾ. ಶಿವರಾಮ ಕಾರಂತ.
Published on

* ಟ್ರಸ್ಟ್​ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಮಾಹಿತಿ 

* ಪ್ರಬಂಧ ಕಳುಹಿಸಲು ಸೆ.15 ಕೊನೆಯ ದಿನ

ಉಡುಪಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್​ ವತಿಯಿಂದ ಅ.10ರಂದು ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳ ಮೂಲಕ ಡಾ. ಶಿವರಾಮ ಕಾರಂತ ಅವರ ಜನ್ಮದಿನ ಆಚರಿಸಲು ನಿರ್ಧರಿಸಲಾಗಿದೆ. ತನ್ನಿಮಿತ್ತವಾಗಿ ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ಪ್ರಬಂಧವು ಫುಲ್​ ಸ್ಕೇಪ್​ ಹಾಳೆಯಲ್ಲಿ ಹತ್ತು ಪುಟ ಅಥವಾ ಎರಡು ಸಾವಿರ ಶಬ್ದ ಮೀರಬಾರದು. ಪ್ರಬಂಧವನ್ನು ಸ್ವಂತ ಅಕ್ಷರಗಳಲ್ಲಿ ಅಥವಾ ಟೈಪ್​ ಮಾಡಬಹುದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು. ಉತ್ತಮ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.
ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಟ್ರಸ್ಟ್​, ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಉಡುಪಿ&576104 ಈ ವಿಳಾಸಕ್ಕೆ ಸೆ.15ರೊಳಗೆ ಕಳುಹಿಸಬೇಕು.
 ಮಾಹಿತಿಗಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ ಮೊ.ಸಂ. 9964583433, 6362517472 ಸಂಪರ್ಕಿಸಬಹುದು ಎಂದು ಟ್ರಸ್ಟ್​ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net