ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ

ಪರ್ಯಾಯ ಶಿರೂರು ಮಠ, ಶ್ರೀಕೃಷ್ಣಮಠದ ಆಶ್ರಯದಲ್ಲಿ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘ ಹಾಗೂ ಹಿಂದಿ ಭಾಷಾ ಬೋಧಕರ ಸಂಘದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ
Conference
ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನದಲ್ಲಿ ಶಾಸಕ ಯಶಪಾಲ್​ ಸುವರ್ಣ ಮಾತನಾಡಿದರು.
Published on: 

ಉಡುಪಿ: ಸಂವಿಧಾನದ 343ನೇ ವಿಧಿ ಪ್ರಕಾರ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಅಂಗೀಕರಿಸಲಾಗಿದೆ. 13 ರಾಜ್ಯಗಳಲ್ಲಿ ಹಿಂದಿ ರಾಜ್ಯಭಾಷೆಯಾಗಿದೆ. ರಾಜ್ಯದಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಹಿಂದಿಯನ್ನು ತೃತೀಯ ಭಾಷೆಯಾಗಿ ಅಧ್ಯಯನ ಮಾಡುತ್ತಿದ್ದು, ರಾಜ್ಯ ಸರ್ಕಾರ ಪರೀೆಯಲ್ಲಿ ಹಿಂದಿ ಭಾಷೆ ವಿರಹಿತಗೊಳಿಸಬಾರದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

ಭಾನುವಾರ ರಾಜಾಂಗಣದಲ್ಲಿ ಪರ್ಯಾಯ ಶಿರೂರು ಮಠ, ಶ್ರೀಕೃಷ್ಣಮಠದ ಆಶ್ರಯದಲ್ಲಿ ರಾಜ್ಯ ಹಿಂದಿ ಭಾಷಾ ಬೋಧಕರ ಸಂಘ ಹಾಗೂ ಹಿಂದಿ ಭಾಷಾ ಬೋಧಕರ ಸಂಘದ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು.

ರಾಜ್ಯದಲ್ಲಿ 22 ಸಾವಿರ ಹಿಂದಿ ಭಾಷಾ ಶಿಕ್ಷಕರಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಿಂದಿಯನ್ನು ಬಿಟ್ಟು ದೇಶಕಟ್ಟಲು ಸಾಧ್ಯವಿಲ್ಲ. ಇದನ್ನು ಸರ್ಕಾರ ಮನಗಾಣಬೇಕು. ವಿದ್ಯಾರ್ಥಿಗಳು ತಮ್ಮದೇ ಆದ ಬದುಕು ಕಟ್ಟಿಕೊಳ್ಳಲು ಕೌಶಲ್ಯ ಭರಿತ ಶಿಕ್ಷಣ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಶಿಕ್ಷಣ ವಿಷಯದಲ್ಲಿ ಸರ್ಕಾರ ಆಟ ಆಡಬಾರದು ಎಂದು ಹೇಳಿದರು.

ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥರು ಆಶೀರ್ವಚನ ನೀಡಿದರು. ಸಂಘದ ರಾಜ್ಯಾಧ್ಯಕ್ಷ ಶಶಿಧರ ಸಿ.ಎಂ. ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಸಕ ಯಶಪಾಲ್​ ಸುವರ್ಣ, ಜಿಲ್ಲಾ ಹಿಂದಿ ಭಾಷಾ ಬೋಧಕರ ಸಂಘದ ಅಧ್ಯಕ್ಷ ಎಚ್​.ಎನ್​.ವೆಂಕಟೇಶ್​, ಗೌರವಾಧ್ಯಕ್ಷ ಡಿ.ಎಂ. ರಾಥೋಡ್​, ಭಾರತೀಯ ಶಿಕ್ಷಾ ಬೋರ್ಡ್​ ಸದಸ್ಯ ಶಶಿಕುಮಾರ್​, ರಾಜಗೋಪಾಲ ಆಚಾರ್ಯ, ಉಮೇಶ್​ ದೊಡ್ಡಮನಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಜಿಲ್ಲಾ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ, ಹಿಂದಿ ಗೀತಾ ಗಾಯನ, ಸಾಂಸತಿಕ ವೈಭವ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net