ಕನಿಷ್ಠ ವೇತನ ನಿಯಮ ತಡೆಯಾಜ್ಞೆ ತೆರವಿಗೆ ಪ್ರಯತ್ನ: ಶಾಹಿದ್​ ತೆಕ್ಕಿಲ್​

ರಾಜ್ಯ ಸರ್ಕಾರ 9 ವರ್ಷದ ಬಳಿಕ ಕನಿಷ್ಠ ವೇತನ ಪರಿಷ್ಕರಿಸಿದ್ದು, ಈ ಬಗ್ಗೆ ಕೆಲವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಹೀಗಾಗಿ ನ್ಯಾಯಾಲಯದ ತಡೆಯಾಜ್ಞೆ ನೀಡಿದ್ದು, ಶೀಘ್ರದಲ್ಲೇ ತಡೆಯಾಜ್ಞೆ ತೆರವಾಗಿ ತೀರ್ಪು ಹೊರಬರುವ ನಿರೀಕ್ಷೆಯಿದೆ.
Wage Advisory Board
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್​ ತೆಕ್ಕಿಲ್​ ಮಾತನಾಡಿದರು.
Published on: 

ಉಡುಪಿ: ರಾಜ್ಯ ಸರ್ಕಾರ 9 ವರ್ಷದ ಬಳಿಕ ಕನಿಷ್ಠ ವೇತನ ಪರಿಷ್ಕರಿಸಿದ್ದು, ಈ ಬಗ್ಗೆ ಕೆಲವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಹೀಗಾಗಿ ನ್ಯಾಯಾಲಯದ ತಡೆಯಾಜ್ಞೆ ನೀಡಿದ್ದು, ಶೀಘ್ರದಲ್ಲೇ ತಡೆಯಾಜ್ಞೆ ತೆರವಾಗಿ ತೀರ್ಪು ಹೊರಬರುವ ನಿರೀಕ್ಷೆಯಿದೆ. ಕಾರ್ಮಿಕರ ಹಕ್ಕು ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್​ ತೆಕ್ಕಿಲ್​ ಹೇಳಿದರು.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸುಮಾರು ಮೂರೂವರೆ ಕೋಟಿ ಕಾರ್ಮಿಕರಿದ್ದು, ಅವರಿಗೆ ನ್ಯಾಯ ದೊರೆಯುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ಕನಿಷ್ಠ 19 ಸಾವಿರ ರೂ. ಹಾಗೂ ನಗರ ಪ್ರದೇಶದ ಕಾರ್ಮಿಕರಿಗೆ 21 ಸಾವಿರ ರೂ. ವೇತನ ನಿಗದಿಪಡಿಸಲಾಗಿದೆ. ಕಾರ್ಮಿಕ ಹಕ್ಕುಗಳ ರಕ್ಷಣೆ, ಆರೋಗ್ಯ ತಪಾಸಣೆ ಹಾಗೂ ಕಲ್ಯಾಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ದಿನಬಳಕೆಯ ವಸ್ತುಗಳು, ಅಡುಗೆ ಅನಿಲ, ಆಹಾರ ಉತ್ಪನ್ನಗಳು ಹಾಗೂ ಬೇಳೆಕಾಳುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅವರ ದುಡಿಮೆಗೆ ತಕ್ಕ ಪ್ರತಿಫಲ ದೊರೆಯಬೇಕು. ಈ ನಿಟ್ಟಿನಲ್ಲಿ ಕನಿಷ್ಠ ವೇತನ ಪರಿಷ್ಕರಣೆ ಅಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಮಿಕ ಸಂಘಟನೆಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಲಾಗುವುದು. ಸರ್ಕಾರ ಕಾರ್ಮಿಕರ ಪರವಾಗಿದ್ದು, ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕಾರ್ಮಿಕರ ಜತೆಗೆ ಮಾಲೀಕರಿಗೂ ಕಾಲಕಾಲಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಮತ್ತು ಅವರ ಲಾಭದಲ್ಲಿ ಬೋನಸ್​ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಾರ್ಮಿಕರ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ವಲಯಗಳ ಕಾರ್ಮಿಕರಿಗೆ ಇದರ ಲಾಭ ಸಿಗಲಿದೆ ಎಂದು ಅವರು ತಿಳಿಸಿದರು.

ಯುವಜನ ಆಯೋಗಕ್ಕೆ ಮನವಿ

ರಾಜ್ಯದ ಯುವಕರು ಮತ್ತು ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಯುವಜನ ಆಯೋಗ ಮತ್ತು ವಯೋಜನ ಆಯೋಗಗಳನ್ನು ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದೇನೆ. ಇದರಿಂದ ಯುವಜನರು ಹಾಗೂ ವೃದ್ಧರ ಅಗತ್ಯತೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಮಿಕ ಅಧಿಕಾರಿ ಕಮಲ್​ ಶಾ ಅಲ್ತ್​ಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net