ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅವರು ಸಂಸ್ಥೆಯ ಕಾರ್ಯಚಟುವಟಿಕೆಯ ಹೊತ್ತಗೆ ನೀಡಿದರು. ರಾಜ್ಯ ಆಡಳಿತ ಮಂಡಳಿಯ ಸದಸ್ಯರು ಇದ್ದರು.
Published on:
Copied
Follow Us
* ರಾಜ್ಯ ಸಭಾಪತಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಲಹೆ
ಉಡುಪಿ: ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಭಾಪತಿ ಮತ್ತು ಉಡುಪಿ ಜಿಲ್ಲಾ ಸಭಾಪತಿಯೂ ಆದ ಬಸ್ರೂರು ರಾಜೀವ್ ಶೆಟ್ಟಿ ಅವರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಬೆಂಗಳುರಿನಲ್ಲಿ ಭೇಟಿಯಾಗಿ ರೆಡ್ಕ್ರಾಸ್ ಚಟುವಟಿಕೆಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದ ರೆಡ್ಕ್ರಾಸ್ನ ಕಾರ್ಯ ಚಟುವಟಿಕೆಗಳ ಬಗ್ಗೆ ತೃಪ್ತಿಯಿದೆ. ಸಂಸ್ಥೆಯನ್ನು ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ತಿಳಿಸಿ, ಕೆಲವು ಸಲಹೆ ನೀಡಿದರು.
ರಾಜ್ಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಮೇ 13ಕ್ಕೆ ಉಡುಪಿಯಲ್ಲಿ ಸಭೆ
ಉಡುಪಿ ಜಿಲ್ಲಾ ರೆಡ್ಕ್ರಾಸ್ ಘಟಕದ ವಾರ್ಷಿಕ ಮಹಾಸಭೆಯು ರೆಡ್ಕ್ರಾಸ್ನ ಅಧ್ಯೆ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಮೇ 13ರಂದು ಬೆಳಿಗ್ಗೆ 10:30ಕ್ಕೆ ಉಡುಪಿಯ ಟೌನ್ಹಾಲ್ನ ಮಿನಿಹಾಲ್ನಲ್ಲಿ ನಡೆಯಲಿದೆ. ರೆಡ್ಕ್ರಾಸ್ನ ಸದಸ್ಯರು ಪಾಳ್ಗೊಳ್ಳಲಿದ್ದಾರೆ ಎಂದು ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ತಿಳಿಸಿದ್ದಾರೆ.