ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ಸಾವು

Death
Death
Published on

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಿ.ಸಿ.ರೋಡಿನ ಕೆಂಪುಗುಡ್ಡೆ ನಿವಾಸಿ, ಬಂಟ್ವಾಳದ ಐಟಿಐ ಕಾಲೇಜು ವಿದ್ಯಾರ್ಥಿ ಹರ್ಷಿತ್ (19) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆರಂಭದಲ್ಲಿ ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದರೂ ಜ್ವರ ಕಡಿಮೆಯಾಗಿರಲಿಲ್ಲ. ಬಳಿಕ ವಾಂತಿ ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net