ಸುಬ್ರಹ್ಮಣ್ಯ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪೂರ್ಣಚಂದ್ರ ಎಂಬುವರ ಪುತ್ರ, ಎಣ್ಮೂರು ಹೈಸ್ಕೂಲಿನ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಕೆಲವು ದಿನಗಳಿಂದ ಅಸೌಖ್ಯಕ್ಕೊಳಗಾಗಿದ್ದ ಶಿಶಿಲ್ ಕಾಣಿಯೂರು, ಪುತ್ತೂರು, ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ದಾಖಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು.
ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡ ಆತನನ್ನು ಪುತ್ತೂರಿಗೆ ಕರೆದೊಯ್ಯುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಶಿಶಿಲ್ ಯಕ್ಷಗಾನ ಹಾಗೂ ನಾಟಕ ಕಲಾವಿದನಾಗಿದ್ದ.