

ಕಾಸರಗೋಡು: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿಮ್ಮತ್ ಮುಸ್ಲಿಮ್ ಎಜುಕೇಶನ್ ಸೆಂಟರ್‌ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಮೊಹಮ್ಮದ್ ಮುಸಾಮಿಲ್(17)ಎಂಬಾತ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಭಾನುವಾರ ಮಧ್ಯಾಹ್ನದಿಂದ ಈತ ಶಿಕ್ಷಣ ಸಂಸ್ಥೆಯಿಂದ ನಾಪತ್ತೆಯಾಗಿರುವ ಬಗ್ಗೆ ಶಿಕ್ಷಣ ಸಂಸ್ಥೆಯ ಅಧ್ಯಾಪಕ ಅಬ್ದುಲ್ ಲತೀಫ್ ಎಂಬವರು ನೀಡಿದ ದೂರಿನಂತೆ ಕುಂಬಳೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.