13ರಂದು ಕಾಲೇಜು ಕ್ಯಾಂಪಸ್‌ನಲ್ಲಿ ತಂಡವೊಂದು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯನ್ನು ತಡೆದು ನಿಲ್ಲಿಸಿ ಬೆದರಿಸಿ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ. ಘಟನೆ ಬಗ್ಗೆ ವಿದ್ಯಾರ್ಥಿ ಪಾಲಕರಿಗೆ ತಿಳಿಸಿದ್ದು ಪ್ರಾಂಶುಪಾಲರಿಗೆ ದೂರು ನೀಡಲಾಗಿತ್ತು. ಕಾಲೇಜು ಅಧಿಕಾರಿಗಳು ಪ್ರಾಥಮಿಕ ತನಿಖೆ ಆಧಾರದಲ್ಲಿ ಆರೋಪಕ್ಕೊಳಗಾದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.