

ಉಡುಪಿ: ದೇಶದ ಸಂವಿಧಾನ ಹಾಗೂ ಸಂಸತ್ನ ಕಾರ್ಯಕಲಾಪಗಳ ಕುರಿತು ವಿದ್ಯಾರ್ಥಿಗಳಿಗೂ ತಿಳಿವಳಿಕೆ ಅಗತ್ಯ. ಆ ಕುರಿತು ಪ್ರಾಯೋಗಿಕ ಜ್ಞಾನ ನೀಡಲೆಂದು ಯುವ ಸಂಸತ್ ಕಾರ್ಯಕ್ರಮ ಆಯೋಜಿಸಲಾಗಿದೆ. 2047ರ ವೇಳೆಗೆ ದೇಶವು ಸಂಪೂರ್ಣ ಅಭಿವೃದ್ಧಿಗೊಂಡು 'ವಿಕಸಿತ ಭಾರತ' ಆಗಬೇಕು ಎನ್ನುವುದು ನಮ್ಮೆಲ್ಲರ ಲಕ್ಷ್ಯವಾಗಿದೆ. ಅದಕ್ಕೆ ಯುವಸಮುದಾಯ ಸನ್ನದ್ಧರಾಗಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು.
ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜ್ನಲ್ಲಿ ಉಡುಪಿ ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ ಕಾನೂನು ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಕಾರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಶುಕ್ರವಾರ (ಅ.16) ಆಯೋಜಿಸಿದ್ದ ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ ಕಾಂಚನ್, ಕಾಲೇಜ್ನ ಪ್ರಾಂಶುಪಾಲೆ ಸುರೇಖಾ ಕೆ. ಮಾತನಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತಾಪಂ ಕಾರ್ಯನಿರ್ವಾಹಣಾಧಿಕಾರಿ ವಿಜಯಾ, ತಾಲೂಕು ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣಕುಮಾರ, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ತೀರ್ಪುಗಾರರಾಗಿ ಎಂಜಿಎಂ ಕಾಲೇಜ್ನ ರಾಜ್ಯಶಾಸ್ತ್ರ ಉಪನ್ಯಾಸಕಿ ಅದಿತಿ ಭಟ್, ನಿವೃತ್ತ ಉಪನ್ಯಾಸಕ ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಸ್ವಾಗತಿಸಿದರು. ಸಿಬ್ಬಂದಿ ಶ್ರೀದೇವಿ ನಿರೂಪಿಸಿದರು. ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮೀ ವಂದಿಸಿದರು.