ವಿಕಸಿತ ಭಾರತಕ್ಕೆ ವಿದ್ಯಾರ್ಥಿಗಳ ಕೊಡುಗೆ

 ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಪ್ರಮುಖರಾದ ಶ್ರೀಧರ ಶೆಟ್ಟಿ, ಭಾಸ್ಕರ ಶೆಟ್ಟಿ ಸಳ್ವಾಡಿ, ಶೋಭಾ ಆರ್. ಉಪಸ್ಥಿತರಿದ್ದರು.

Published on

ಬ್ರಹ್ಮಾವರ: ಪ್ರತಿ ವಿದ್ಯಾರ್ಥಿಗಳು ಇಂದಿನ ವಿದ್ಯಾಮಾನ, ಮುಂದಿನ ಯೋಜನೆ ಜತೆಗೆ ಇತಿಹಾಸ ಮತ್ತು ಚರಿತ್ರೆ ತಿಳಿಯಬೇಕು. ಜಗತ್ತಿನಲ್ಲಿಯೇ ವಿಶಿಷ್ಟ ಸಾಧನೆ ಮಾಡಲು ದೇಶದ ಹಲವು ರಂಗದಲ್ಲಿ ತೊಡಗಿಸಿಕೊಂಡು ವಿಕಸಿತ ಭಾರತಕ್ಕೆ ಮಹಾನ್ ಕೊಡುಗೆಯಾಗಬೇಕು ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದಿಂದ ಕಾಲೇಜಿನ ಸ್ಥಾಪಕ ಬಾರಕೂರು ಸುಧಾಕರ ಶೆಟ್ಟಿ ಸ್ಮರಣಾರ್ಥ ಶುಕ್ರವಾರ ಆಯೋಜಿಸಲಾದ ರಾಷ್ಟ್ರೀಯ ವಿಚಾರ ಸಂಕಿರಣ ವಿಕಸಿತ ಭಾರತ-2047 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಂಬೈ ಪವಾಯಿ ಎಸ್.ಎಂ.ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ ಶೆಟ್ಟಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಸಳ್ವಾಡಿ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಶೋಭಾ ಆರ್. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net