ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರಾಯೋಗಿಕ ಜ್ಞಾನ ಅಗತ್ಯ

 ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಅಮೃತ ಆಸ್ವಾದ ುಡ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ರಾಮಕೃಷ್ಣ ಆಚಾರ್ಯ, ಪ್ರಕಾಶ್ ಜೋಗಿ, ಪಿಆರ್‌ಒ ವಿಜಯ್ ಕುವಾರ್ ಶೆಟ್ಟಿ ಮತ್ತಿತರರಿದ್ದರು.
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಅಮೃತ ಆಸ್ವಾದ ುಡ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ರಾಮಕೃಷ್ಣ ಆಚಾರ್ಯ, ಪ್ರಕಾಶ್ ಜೋಗಿ, ಪಿಆರ್‌ಒ ವಿಜಯ್ ಕುವಾರ್ ಶೆಟ್ಟಿ ಮತ್ತಿತರರಿದ್ದರು.
Published on
ಹೆಬ್ರಿ: ಎಳವೆಯಲ್ಲಿಯೇ ವ್ಯವಹಾರ ಜ್ಞಾನ ಕಲಿತುಕೊಳ್ಳಬೇಕು ಎನ್ನುವ ನೆಲೆಯಲ್ಲಿ ಅಮೃತ ಭಾರತಿ ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರಾಯೋಗಿಕ ಜ್ಞಾನ ತಿಳಿಸುವ ಅಮೃತ ಆಸ್ವಾದ ಕಾರ್ಯಕ್ರಮ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿದೆ ಎಂದು ಅಮೃತ ಭಾರತಿ ಹಾಸ್ಟೆಲ್ ಸಮಿತಿಯ ಗೌರವ ಅಧ್ಯಕ್ಷ ಯೋಗೀಶ್ ಭಟ್ ಹೇಳಿದರು.
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಮೃತ ಆಸ್ವಾದ ಫುಡ್ ಫೆಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿ ವಾತನಾಡಿ, ಉದ್ಯಮ ರಂಗದಲ್ಲಿ ಎಷ್ಟು ಎತ್ತರಕ್ಕೆ ಬೇಕಾದರೂ ಬೆಳೆಯಬಹುದು. ಕಾರ್ಮಿಕರಾಗಿ ವೃತ್ತಿ ಆರಂಭಿಸಿದವರು ಇಂದು ಉದ್ಯಮ ರಂಗದ ದಿಗ್ಗಜರಾಗಿ ಬೆಳೆದ ಸಾವಿರಾರು ಉದಾಹರಣೆ ಕಾಣಬಹುದು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮುಂದೆ ಉದ್ಯಮ ರಂಗದಲ್ಲಿ ಮಹತ್ತರ ಸಾಧನೆ ವಾಡಲಿ ಎಂದರು.
ಹೆಬ್ರಿಯ ಸುಕೇಶ್ ಶೆಟ್ಟಿ ಉದ್ಘಾಟಿಸಿದರು. ಹಾಸ್ಟೆಲ್ ಕಮಿಟಿ ಸದಸ್ಯರಾದ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಪ್ರಕಾಶ್ ಜೋಗಿ, ಪಿಆರ್‌ಒ ವಿಜಯ್ ಕುವಾರ್ ಶೆಟ್ಟಿ, ಕಾಮರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಸನ್ನಿಧಿ ಸ್ವಾಗತಿಸಿದರು. ತ್ರಿಷಾ ಅತಿಥಿಗಳ ಪರಿಚಯಿಸಿದರು. ರೀಶಾ ಪೂಜಾರಿ ನಿರೂಪಿಸಿದರು. ಶಾರ್ವರಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net