ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ದೆಹಲಿಯ ಜಂತರ್ ಮಂತರ್ನ ಹೋರಾಟಕ್ಕೆ ಬೆಂಬಲಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಬಳಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿದರು.
Published on:
Copied
Follow Us
* ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಖಂಡನೆ
* ಮಣಿಪಾಲದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಈ ವಿಚಾರವಾಗಿ ಮೌನ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಣಿಪಾಲದಲ್ಲಿ ನೂರಾರು ವಿದ್ಯಾರ್ಥಿಗಳು ಶುಕ್ರವಾರ (ಜು.24) ಸಂಜೆ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಭಾರತ ಮಾತೆಗೆ ಜೈಕಾರ ಹಾಕಿದರು. ದೆಹಲಿಯ ಜಂತರ್ ಮಂತರ್ನ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಹುದ್ದೆಯಿಂದ ಇಳಿಯರಿ
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೋಹನ್ ಮಚಾಡೋ ಮಾತನಾಡಿ, ಸಾಂವಿಧಾನಿಕವಾಗಿ ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಅದಕ್ಕಾಗಿ ವಿದ್ಯಾರ್ಥಿಗಳು ಸಾಕಷ್ಟು ವರ್ಷ ಶ್ರಮಿಸುತ್ತಾರೆ. ಕೇಂದ್ರ ಸರ್ಕಾರದ ವೈಫಲ್ಯದಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಅನೇಕ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಆದರೂ ನಮ್ಮನ್ನಾಳುವ ಸರ್ಕಾರ ಬಾಯಿಗೆ ಬೀಗ ಹಾಕಿ ಕುಳಿತಿದೆ. ಕೇಂದ್ರ ಶಿಕ್ಷಣ ಸಚಿವ ಹಾಗೂ ಪ್ರಧಾನಿ ಯಾವುದೇ ಕಾರಣಕ್ಕೂ ಅವರ ಹುದ್ದೆಯಲ್ಲಿ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಹಬಾಳ್ವೆಯ ಅಧ್ಯಕ್ಷ ಪ್ರೊ. ಕೆ.ಣಿರಾಜ್, ಮುಖಂಡ ವಿಶ್ವಾಸ್ ಅಮೀನ್, ದಲಿತ ಸಂರ್ಷ ಸಮಿತಿ ಪ್ರಮುಖರಾದ ಶ್ಯಾಮ್ರಾಜ್ ರ್ಬಿತಿ, ಪ್ರಶಾಂತ್ ರ್ಬಿತಿ, ಪ್ರಕಾಶ್ ಹೇರೂರು, ಎಸ್ಐಒ ಜಿಲ್ಲಾಧ್ಯ ಅಯಾನ್ ಮಲ್ಪೆ ಇತರರು ಉಪಸ್ಥಿತರಿದ್ದರು.
ಡಿಸಿ ಕಚೇರಿ ಬಳಿ ಕರಪತ್ರ ಪ್ರದರ್ಶನ
ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಸತ್ಯಾಗ್ರಹ ಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕರಪತ್ರ ಪ್ರದರ್ಶಿಸಿದರು. ಇದು ದುರಂತವೆಂದು ಮೌನ ಪ್ರಾರ್ಥನೆ ಮೂಲಕ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ವಿದ್ಯಾರ್ಥಿ ನಾಯಕಿ ಜೂನ್ ಮೆಹತಿ ಕೊಲ್ಕತ್ತಾ ಮಾತನಾಡಿ, ವಿದ್ಯಾರ್ಥಿಗಳಿಗೆ ನ್ಯಾಯ ನೀಡುವಂತೆ ಆಗ್ರಹಿಸಿದರು.