ಕಾನೂನು ಪಾಲಿಸಿದಾಗ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು

  ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಾಗಾರ ನಡೆಯಿತು. ವಕೀಲ ಮಂಜುನಾಥ ಗಿಳಿಯಾರು, ಪ್ರೊ.ರಾಮರಾಯ ಆಚಾರ್ಯ ಇತರರು ಇದ್ದರು.
ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಕಾರ್ಯಾಗಾರ ನಡೆಯಿತು. ವಕೀಲ ಮಂಜುನಾಥ ಗಿಳಿಯಾರು, ಪ್ರೊ.ರಾಮರಾಯ ಆಚಾರ್ಯ ಇತರರು ಇದ್ದರು.
Published on
ಕುಂದಾಪುರ: ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಅರಿವಿನ ಅಗತ್ಯ ಇದೆ. ಕಾನೂನನ್ನ ಅರಿತುಕೊಂಡು ಅದನ್ನು ಗೌರವಿಸಿ ಜೀವನ ನಡೆಸಿದಾಗ ಚಿಂತೆ ಮುಕ್ತ ಜೀವನ ನಮ್ಮದಾಗುತ್ತದೆ. ಪ್ರತಿಯೊಂದು ಕಾನೂನು ನಮಗೆ ಜವಾಬ್ದಾರಿ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾನೂನು ನಮ್ಮ ದೈನಂದಿನ ಜೀವನ ಹಾಗೂ ಸಾಮಾಜಿಕ ವ್ಯವಹಾರಿಕ ಬದುಕಿನಲ್ಲಿ ಮುಖ್ಯಪಾತ್ರ ವಹಿಸುತ್ತದೆ.
ಆದರೆ ವ್ಯವಹಾರ ಕ್ಷೇತ್ರದಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ವಕೀಲ ಮಂಜುನಾಥ ಗಿಳಿಯಾರು ಹೇಳಿದರು.
ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಕಾನೂನು ಎಂಬ ವಿಷಯದಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪ್ರಾಂಶುಪಾಲ ಪ್ರೊ.ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ ಬಿ., ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಪೈ, ಗ್ರಂಥಪಾಲಕ ರವಿಚಂದ್ರ ಎಚ್.ಎಸ್., ಉಪನ್ಯಾಸಕರಾದ ಉಜ್ವಲಾ ಶೆಟ್ಟಿ, ಸಾವಿತ್ರಿ, ಪಲ್ಲವಿ ಉಪಸ್ಥಿತರಿದ್ದರು.
ನಿಶಾ ಸ್ವಾಗತಿಸಿದರು. ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉದಯ ಶೆಟ್ಟಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಖಿತಾ ನಿರೂಪಿಸಿದರು. ಅನುಷಾ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net