ಕಸದ ವೈಜ್ಞಾನಿಕ ನಿರ್ವಹಣೆಯಿಂದ ಸುಸ್ಥಿರ ಗ್ರಾಮ

 ಸಾವಯವ ಗೊಬ್ಬರ ಗ್ರೀನ್ ಗೋಲ್ಡ್‌ನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ಲೋಕಾರ್ಪಣೆ ಮಾಡಿದರು. ರಮೇಶ್ ನೂಜಿಪ್ಪಾಡಿ ಹಾಗೂ ಅಶ್ವಿನಿ ಕೆ.ಭಟ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ಸಂಯೋಜಕ ನವೀನ್, ಘನತ್ಯಾಜ್ಯ ನಿರ್ವಹಣೆ ಜಿಲ್ಲಾ ಸಂಯೋಜಕ ಪವನ್ ಉಪಸ್ಥಿತರಿದ್ದರು.
ಸಾವಯವ ಗೊಬ್ಬರ ಗ್ರೀನ್ ಗೋಲ್ಡ್‌ನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ಲೋಕಾರ್ಪಣೆ ಮಾಡಿದರು. ರಮೇಶ್ ನೂಜಿಪ್ಪಾಡಿ ಹಾಗೂ ಅಶ್ವಿನಿ ಕೆ.ಭಟ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ಸಂಯೋಜಕ ನವೀನ್, ಘನತ್ಯಾಜ್ಯ ನಿರ್ವಹಣೆ ಜಿಲ್ಲಾ ಸಂಯೋಜಕ ಪವನ್ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಹಸಿ ಕಸವನ್ನು ಮೂಲದಲ್ಲಿಯೇ ಪ್ರತ್ಯೇಕಿಸಿ ವೈಜ್ಞಾನಿಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಹಾಗೂ ಸುಸ್ಥಿರ ಗ್ರಾಮಗಳನ್ನು ನಿರ್ಮಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ ತಿಳಿಸಿದರು.
ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುತ್ತಿರುವ ಹಸಿಕಸದ ಸಮಸ್ಯೆಗೆ ಶಾಶ್ವತ ಹಾಗೂ ಪರಿಸರಸ್ನೇಹಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹಸಿರುದಳ ಆಶ್ರಯದಲ್ಲಿ ಬಲ್ಮಠದಲ್ಲಿ ಆಯೋಜಿಸಲಾದ ಸಾವಯವ ಗೊಬ್ಬರ ತಯಾರಿ ತರಬೇತಿ ಕಾರ್ಯಕ್ರಮದಲ್ಲಿ ಹಸಿರು ದಳ ಕಾರ್ಯನಿರ್ವಹಿಸುತ್ತಿರುವ ವಿವಿಧ ಗ್ರಾಪಂಗಳಲ್ಲಿ ಹಸಿ ಕಸದಿಂದ ತಯಾರಿಸಲಾದ ಸಂಪೂರ್ಣ ಸಾವಯವ ಗೊಬ್ಬರ ಗ್ರೀನ್ ಗೋಲ್ಡ್‌ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ರಮೇಶ್ ನೂಜಿಪ್ಪಾಡಿ ಹಾಗೂ ಅಶ್ವಿನಿ ಕೆ.ಭಟ್, ಎರೆಹುಳ ಗೊಬ್ಬರ, ಬಿನ್ ಕಾಂಪೋಸ್ಟಿಂಗ್, ಮನೆಯಲ್ಲಿಯೇ ಸಾವಯವ ಗೊಬ್ಬರ ತಯಾರಿಕೆ, ಟೆರಸ್ ಗಾರ್ಡನಿಂಗ್ ಹಾಗೂ ಹಸಿ ಕಸದ ವೈಜ್ಞಾನಿಕ ನಿರ್ವಹಣೆ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ಸಂಯೋಜಕ ನವೀನ್ ಹಾಗೂ ಘನತ್ಯಾಜ್ಯ ನಿರ್ವಹಣೆ ಜಿಲ್ಲಾ ಸಂಯೋಜಕ ಪವನ್, ಗ್ರಾಮ ಪಂಚಾಯಿತಿಗಳಲ್ಲಿ ಹಸಿ ಕಸ ನಿರ್ವಹಣೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕೊಣಾಜೆ ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ್, ಪುದು ಗ್ರಾಪಂ ಮಾಜಿ ಅಧ್ಯಕ್ಷೆ ರಮೀಝ್ ಬಾನು, ಗ್ರಾಪಂ ಪ್ರತಿನಿಧಿಗಳು, ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ಸ್ವಸಹಾಯ ಸಂಘಗಳ ಸದಸ್ಯರು, ಪರಿಸರಾಸಕ್ತರು ಹಾಗೂ ಬಳ್ಳಾರಿ ಜಿಲ್ಲೆಯಿಂದ ಆಗಮಿಸಿದ ಅಧಿಕಾರಿಗಳು ಭಾಗವಹಿಸಿದ್ದರು. ಹಸಿರು ದಳದ ಪ್ರಜ್ವಲ್ ಸ್ವಾಗತಿಸಿದರು. ವ್ಯವಸ್ಥಾಪಕ ನಾಗರಾಜ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಿಯಾ ವಂದಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net