ಯುವಜನತೆ ಜಾಗೃತಿಗಾಗಿ ಸ್ವಾಸ್ಥ್ಯ ಸಂಕಲ್ಪ ಆನ್‌ಲೈನ್ ಮಾಹಿತಿ

 ಸ್ವಾಸ್ಥ್ಯ ಸಂಕಲ್ಪ ಆನ್‌ಲೈನ್ ಕಾರ್ಯಕ್ರಮವನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ತಾರನಾಥ್ ಕುಮಾರ್ ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಜಿಲ್ಲಾ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಮೊದಲಾದವರಿದ್ದರು.
ಸ್ವಾಸ್ಥ್ಯ ಸಂಕಲ್ಪ ಆನ್‌ಲೈನ್ ಕಾರ್ಯಕ್ರಮವನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ತಾರನಾಥ್ ಕುಮಾರ್ ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಜಿಲ್ಲಾ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಮೊದಲಾದವರಿದ್ದರು.
Published on
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳದ ಜನಜಾಗೃತಿ ವೇದಿಕೆ ವತಿಯಿಂದ ಪಾಣೆಮಂಗಳೂರು ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ಷೇತ್ರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಸ್ವಾಸ್ಥ್ಯ ಸಂಕಲ್ಪ ಆನ್‌ಲೈನ್ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಯಿತು.
ಬಂಟ್ವಾಳ ನಗರ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ತಾರನಾಥ್ ಕುಮಾರ್ ಉದ್ಘಾಟಿಸಿದರು. ರಾಜ್ಯದ ಸುಮಾರು 1011 ಶಾಲಾ ಕಾಲೇಜುಗಳಲ್ಲಿ ಯುವಜನತೆಗೆ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲು ಏಕಕಾಲದಲ್ಲಿ ಆನ್‌ಲೈನ್ ಮೂಲಕ ಮಾಹಿತಿ ನೀಡುವ ಕಾರ್ಯಕ್ರಮವಾಗಿದ್ದು, ಬೆಂಗಳೂರು ಎಸ್‌ಪಿ ಡಾ.ವೆಂಕಟೇಶ್ ಪ್ರಸನ್ನ, ಬೆಂಗಳೂರಿನ ಹೃದಯ ರೋಗ ತಜ್ಞ ಡಾ.ದೇವಿಪ್ರಸಾದ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜನಜಾಗೃತಿ ವೇದಿಕೆಯ ವಿವೇಕ್ ವಿನ್ಸೆಂಟ್ ಪಾಯಸ್ ನೇರ ಸಂಪರ್ಕದಲ್ಲಿದ್ದು ಕಾರ್ಯಕ್ರಮ ವೀಕ್ಷಿಸಿದರು.
ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆನ್‌ಲೈನ್ ಕಾರ್ಯಕ್ರಮದ ನಂತರ ಜನಜಾಗೃತಿ ವೇದಿಕೆ ಜಿಲ್ಲಾ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಮಾತನಾಡಿದರು.
ಬಂಟ್ವಾಳ ನಗರ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೆಬಲ್ ರಕ್ಷಿತ್ ರೈ, ಕಾಲೇಜು ಪ್ರಾಂಶುಪಾಲೆ ಎನ್.ಎಸ್.ಜೈರಾಬಿ, ಸಜೀಪಮೂಡ ಒಕ್ಕೂಟ ಅಧ್ಯಕ್ಷೆ ಹರಿಣಾಕ್ಷಿ, ಸೇವಾ ಪ್ರತಿನಿಧಿ ಬಬಿತಾ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಸ್ಫೂರ್ತಿ ಸ್ವಾಗತಿಸಿದರು. ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವಲಕ್ಷ್ಮೀ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net