ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ

 ಕಡಬ ತಾಲೂಕುಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಪ್ರಮುಖರಾದ ತಮನ್ನಾ ಜಬೀನ್, ಗಣೇಶ್ ಸವನೂರ, ಕೃಷ್ಣಪ್ಪ ದೇವಾಡಿಗ ಸನಿಲ ಮೊದಲಾದವರು ಉಪಸ್ಥಿತರಿದ್ದರು.
ಕಡಬ ತಾಲೂಕುಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಪ್ರಮುಖರಾದ ತಮನ್ನಾ ಜಬೀನ್, ಗಣೇಶ್ ಸವನೂರ, ಕೃಷ್ಣಪ್ಪ ದೇವಾಡಿಗ ಸನಿಲ ಮೊದಲಾದವರು ಉಪಸ್ಥಿತರಿದ್ದರು.
Published on
ಕಡಬ: ನಾಗರಿಕರು ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಿಲ್ಲದಿರುವುದು, ಸಣ್ಣಪುಟ್ಟ ಕೆಲಸಗಳಿಗೂ ತಿಂಗಳುಗಟ್ಟಲೆ ಕಚೇರಿಗಳಿಗೆ ಅಲೆದಾಡುವುದು ಮತ್ತಿತರ ಸಮಸ್ಯೆಗಳು ಎದುರಾಗುತ್ತಿವೆ. ಇಂಥ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಪ್ರಜಾಸೇವಾ ಆಂದೋಲನ ಯಶಸ್ವಿಯಾಗಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಹೊಸಮಠ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಕಡಬ ತಾಲೂಕುಮಟ್ಟದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಕಡೆ ಲಭ್ಯವಿರುವುದರಿಂದ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್, ಕಡಬ ತಹಸೀಲ್ದಾರ್ ಗಣೇಶ್ ಸವನೂರ, ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ ಸನಿಲ, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ವಿವಿಧ ಅಹವಾಲು ಸಲ್ಲಿಸಿದರು. ಉಪತಹಸೀಲ್ದಾರ್ ಗೋಪಾಲ್ ಕೆ. ಸ್ವಾಗತಿಸಿದರು.

ಕಡಬ ತಾಲೂಕು ರಚನೆಯಾದ ಬಳಿಕವೂ ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳ ನೇಮಕಾತಿ ಸೇರಿದಂತೆ ಹಲವು ಆಡಳಿತಾತ್ಮಕ ಸಮಸ್ಯೆ ಮುಂದುವರಿದಿವೆ. ತಾಲೂಕುಮಟ್ಟದ ಅಧಿಕಾರಿಗಳ ನೇಮಕಾತಿ ಸಮರ್ಪಕವಾಗಿ ನಡೆದಾಗ ಮಾತ್ರ ಕಡಬ ತಾಲೂಕಿನ ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net