ರಸ್ತೆಯುದ್ದಕ್ಕೂ ಮಳೆ ನೀರು ಆವರಿಸಿರುವುದರಿಂದ ದ್ವಿಚಕ್ರ ವಾಹನ ಸವಾರರ ಪರಿಸ್ಥಿತಿ ಹೇಳತೀರದಾಗಿದೆ. ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು, ಸಾರ್ವಜನಿಕರು ರಸ್ತೆ ದಾಟಲು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪುರಸಭೆಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಸತೀಶ್ ಸಮಗಾರಗುಂಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಸಂಕಷ್ಟಕ್ಕೆ ಪುರಸಭೆ ತಕ್ಷಣ ಸ್ಪಂದಿಸಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.