ಮಕ್ಕಳ ಸುರಕ್ಷೆ, ಆರೋಗ್ಯ ಕಾಳಜಿ ವಹಿಸಿ

  ಬೈಂದೂರು ಕ್ಷೇತ್ರ ವ್ಯಾಪ್ತಿಯ ವಿವಿಧ ಹಾಸ್ಟೆಲ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು. ಹಾಕಪ್ಪ ಆರ್.ಲವಾಣಿ, ಆಶಾ ದೇವಿ ನಾಯಕ್, ನಾರಾಯಣ ಸ್ವಾಮಿ ಮತ್ತಿತರರಿದ್ದರು.
ಬೈಂದೂರು ಕ್ಷೇತ್ರ ವ್ಯಾಪ್ತಿಯ ವಿವಿಧ ಹಾಸ್ಟೆಲ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು. ಹಾಕಪ್ಪ ಆರ್.ಲವಾಣಿ, ಆಶಾ ದೇವಿ ನಾಯಕ್, ನಾರಾಯಣ ಸ್ವಾಮಿ ಮತ್ತಿತರರಿದ್ದರು.
Published on
ಕುಂದಾಪುರ: ಉಡುಪಿ ಜಿಲ್ಲೆ ವಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಕಡೆಗಳಿಂದ ನಮ್ಮೂರಿನ ಸರ್ಕಾರಿ ಹಾಸ್ಟೆಲ್‌ಗಳಿಗೆ ಮಕ್ಕಳು ಬರುತ್ತಾರೆ. ಇಲ್ಲಿನ ಒಳ್ಳೆಯ ವ್ಯವಸ್ಥೆ, ಶಿಕ್ಷಣದ ಗುಣಮಟ್ಟ, ಸುರಕ್ಷತೆ ಇದಕ್ಕೆ ಕಾರಣ. ಅದನ್ನು ಇನ್ನಷ್ಟು ಉತ್ತಮಗೊಳಿಸುವ ಜತೆಗೆ ಎಲ್ಲ ಹಾಸ್ಟೆಲ್‌ಗಳಲ್ಲೂ ಮಕ್ಕಳ ಸುರಕ್ಷತೆ, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯದಲ್ಲಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸವಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸೋಮವಾರ ನಡೆದ ಹಿಂದುಳಿದ ವರ್ಗಗಳ ಹಾಗೂ ಸವಾಜ ಕಲ್ಯಾಣ ಇಲಾಖೆಯಡಿ ಇರುವ ಬೈಂದೂರು ಕ್ಷೇತ್ರ ವ್ಯಾಪ್ತಿಯ ವಿವಿಧ ಹಾಸ್ಟೆಲ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿದರು.

ಇಲಾಖೆಯಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್.ಲವಾಣಿ, ತಾಲೂಕು ವಿಸ್ತರಣಾಧಿಕಾರಿ ಆಶಾ ದೇವಿ ನಾಯಕ್, ಸವಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಹಾಯಕ ನಿರ್ದೇಶಕ ರಮೇಶ್ ಕುಲಾಲ್, ಅಧಿಕಾರಿಗಳು, ವಿವಿಧ ಹಾಸ್ಟೆಲ್‌ಗಳ ವಾರ್ಡನ್‌ಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net