ಉಡುಪಿಯ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಯಶ್ಪಾಲ್ ಸುವರ್ಣ, ರಮೇಶ್ ಹೆಗಡೆ. ಎಂ.ಆರ್. ಹೆಗಡೆ, ಪೂರ್ಣಿಮಾ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
Published on:
Copied
Follow Us
* ವಿದ್ಯಾರ್ಥಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಕಿವಿಮಾತು
* ವಳಕಾಡು ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
ಉಡುಪಿ: ವಳಕಾಡು ಸರ್ಕಾರಿ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದು ಹಾಗೂ ಹೆಚ್ಚಿನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸಾಗಿರುವುದು ಹೆಮ್ಮೆಯ ವಿಚಾರ. ಗುಣಮಟ್ಟದಲ್ಲೂ ಗ್ರೇಡ್ ಪಡೆದಿರುವುದು ಸಾಧನೆಯ ಸಂಕೇತವಾಗಿದೆ. ಈ ಯಶಸ್ಸು ಮುಂದುವರಿಯಲಿ. ಇಲ್ಲಿ ಕಲಿತ ಮಕ್ಕಳು ಸದ್ಗುಣಗಳೊಂದಿಗೆ ಶ್ರೇಷ್ಠ ಭಾರತ ರಾಷ್ಟ್ರ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಕಿವಿಮಾತು ಹೇಳಿದರು.
ಉಡುಪಿ ತಾಲೂಕಿನ ವಳಕಾಡಿನಲ್ಲಿರುವ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ನಳಂದಾ ಸಭಾ ಭವನದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 44 ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಹೆಗಡೆ. ಜಿಪಂ ಶಿಕ್ಷಣ ಸಮಿತಿಯ ಗೌರವ ಸಲಹೆಗಾರ ಎಂ.ಆರ್. ಹೆಗಡೆ ಉಪಸ್ಥಿತರಿದ್ದರು. ಎಸ್ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ಕವಿತಾ ವಂದಿಸಿದರು. ವಿದ್ಯಾರ್ಥಿನಿಯರಾದ ಭೂಮಿಕಾ ಮತ್ತು ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.