ವಿನಯ, ಶಿಸ್ತಿನಿಂದ ನಡೆದರೆ ಉನ್ನತ ಸ್ಥಾನ

 ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ ಶ್ರೀ ಮಹಾಗಣಪತಿ ಸೇವಾ ವೃಂದದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಭವಾನಿ ಶಂಕರ್ ಭಟ್ ಇರುವೈಲು, ಪ್ರಾಂಶುಪಾಲೆ ಗಾಯತ್ರಿ ಶಿವರಾಯ ಪ್ರಭು ಮೊದಲಾದವರಿದ್ದರು.
ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ ಶ್ರೀ ಮಹಾಗಣಪತಿ ಸೇವಾ ವೃಂದದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಭವಾನಿ ಶಂಕರ್ ಭಟ್ ಇರುವೈಲು, ಪ್ರಾಂಶುಪಾಲೆ ಗಾಯತ್ರಿ ಶಿವರಾಯ ಪ್ರಭು ಮೊದಲಾದವರಿದ್ದರು.
Published on
ಬಂಟ್ವಾಳ: ಇತ್ತೀಚಿನ ಸ್ಪರ್ಧಾತ್ಮಕ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು, ವಿನಯ, ಶಿಸ್ತಿನಿಂದ ನಡೆದರೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ ಎಂದು ಜೋತಿಷಿ ಭವಾನಿ ಶಂಕರ್ ಭಟ್ ಇರುವೈಲು ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ಪೆ ಗ್ರಾಮದ ಕಿನ್ನಾಜೆ ಗಣಪತಿ ದೇವಸ್ಥಾನ ವಠಾರದಲ್ಲಿ, ಶ್ರೀ ಮಹಾ ಗಣಪತಿ ಸೇವಾ ವೃಂದದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಾಯತ್ರಿ ಶಿವರಾಯ ಪ್ರಭು ಮಾತನಾಡಿ, ಮಕ್ಕಳು ತಮ್ಮ ದೈನಂದಿನ ಕೆಲಸ ತಾವೇ ಮಾಡಿಕೊಂಡು ಶಿಕ್ಷಣ ಪಡೆಯುವ ಮೂಲಕ ಹಿರಿಯರೊಂದಿಗೆ ಗೌರವದಿಂದ ವರ್ತಿಸಬೇಕು ಎಂದರು.
ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ರಮೇಶ್ ನಾಯಕ್ ರಾಯಿ ಮಾತನಾಡಿ, ವಿದ್ಯಾರ್ಥಿಗಳು ಪರಸ್ಪರ ಅನುಕರಣೆಯ ಮತ್ತು ಒತ್ತಡ, ಒತ್ತಾಯದ ಒಂದೇ ರೀತಿಯ ಶಿಕ್ಷಣವನ್ನು ಪಡೆಯದೆ ಜನೋಪಯೋಗಿ, ಸಮಾಜಮುಖಿ ಆಯ್ಕೆಯತ್ತ ಯೋಚನೆ ಮಾಡಬೇಕು ಎಂದರು.
ಶೇ.90ಕ್ಕಿಂತ ಅಧಿಕ ಅಂಕ ಪಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಗಣೇಶ್ ಪ್ರಭು ಪಂಜಿಕಲ್ಲು, ದಯಾನಂದ ಭಟ್ ಬಾಳ್ತಿಲ, ನಿವೃತ್ತ ಶಿಕ್ಷಕರಾದ ಕೆ.ನಾರಾಯಣ ನಾಯಕ್, ಪ್ರಭಾಕರ ಪ್ರಭು, ಪ್ರಮುಖರಾದ ದಾಮೋದರ ನಾಯಕ್, ಶಶಿಧರ ಶೆಣೈ, ಗೋಪಾಲಕೃಷ್ಣ ಪ್ರಭು, ಪ್ರಭಾಕರ ಪ್ರಭು, ಚಂದ್ರಶೇಖರ ಪ್ರಭು ಹೆಣ್ಣುರು, ರವೀಂದ್ರ ನಾಯಕ್ ಬೋಳಂಗಡಿ, ರಾಮರಾಯ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಸೇವಾ ವೃಂದದ ಅಧ್ಯಕ್ಷ ಸುಧಾಕರ ಪ್ರಭು ಸ್ವಾಗತಿಸಿದರು. ಶಿಕ್ಷಕ ಕೆ.ರವೀಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಕೆ.ರಾಮಕೃಷ್ಣ ನಾಯಕ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net