ತಾಲೂಕುಮಟ್ಟದ ಸಾಹಿತ್ಯ ಸಮ್ಮೇಳನ ಸಂಪನ್ನ

 ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ವಿವಿಧ ಸಾಧಕರನ್ನು ಗೌರವಿಸಲಾಯಿತು. ಸಮ್ಮೇಳನ ಅಧ್ಯಕ್ಷ ಅಬ್ದುಲ್ ಹಮೀದ್ ಪಕ್ಕಲಡ್ಕ, ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರು, ಮಾಜಿ ಸಚಿವ ಕೆ.ಅಭಯಚಂದ್ರ ಮೊದಲಾದವರಿದ್ದರು.
ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ವಿವಿಧ ಸಾಧಕರನ್ನು ಗೌರವಿಸಲಾಯಿತು. ಸಮ್ಮೇಳನ ಅಧ್ಯಕ್ಷ ಅಬ್ದುಲ್ ಹಮೀದ್ ಪಕ್ಕಲಡ್ಕ, ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರು, ಮಾಜಿ ಸಚಿವ ಕೆ.ಅಭಯಚಂದ್ರ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಡುಬಿದಿರೆ ತಾಲೂಕು ಘಟಕ ಆಶ್ರಯದಲ್ಲಿ ಕಡಂದಲೆ ಪಾಲಡ್ಕ ಪೂಪಾಡಿಕಲ್ಲು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ತಾಲೂಕುಮಟ್ಟದ ದ್ವಿತೀಯ ಸಾಹಿತ್ಯ ಸಮ್ಮೇಳನ ಸಂಪನ್ನಗೊಂಡಿತು.
ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ತಾಲೂಕಿನಲ್ಲಿ ಗರಿಷ್ಠ ಅಂಕ ಗಳಿಸಿದ 12 ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. ಸಮ್ಮೇಳನಾಧ್ಯಕ್ಷ ಅಬ್ದುಲ್‌ಹಮೀದ್ ಪಕ್ಕಲಡ್ಕ ಅವರನ್ನು ಪತ್ನಿ ಝುಬೇದಾ ಹಾಗೂ ಪುತ್ರ, ಕೃಷಿಗೆ ಮರಳಿದ ಇಂಜಿನಿಯರ್ ಇಮ್ಮಿಯಾಸ್ ಸಾನಿಮ್ ಅವರೊಂದಿಗೆ ಸನ್ಮಾನಿಸಲಾಯಿತು. ಕಾರ್ಯಾಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಸಮ್ಮೇಳನ ಅಧ್ಯಕ್ಷ ಅಬ್ದುಲ್ ಹಮೀದ್ ಪಕ್ಕಲಡ್ಕ, ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಾಜಿ ಸಚಿವ ಕೆ.ಅಭಯಚಂದ್ರ, ವೈಬ್ರೆಂಟ್ ಶಿಕ್ಷಣ ಮತ್ತು ಸೇವಾ ಸಂಸ್ಥೆ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಡಾ.ವೆಂಕಟೇಶ್ ನಾಯಕ್, ಪ್ರಗತಿಪರ ಕೃಷಿಕ ರಾಜವರ್ಮ ಬೈಲಂಗಡಿ, ಉದ್ಯಮಿ ಕೆ.ಶ್ರೀಪತಿ ಭಟ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸದಾಶಿವ ರೈ, ಉದ್ಯಮಿ ಜಗಜೀವನ್ ಶೆಟ್ಟಿ ಕಡಂದಲೆ ಉಪಸ್ಥಿತರಿದ್ದರು.
ಮೂಡುಕೊಣಾಜೆ ಕಸಾಪ ಘಟಕಾಧ್ಯಕ್ಷ ವೇಣುಗೋಪಾಲ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಮಹಾದೇವ ಯತಿರಾಜ ಶೆಟ್ಟಿ, ಸದಸ್ಯರಾದ ನಾಗರತ್ನ ಶಿರೂರು, ಅನಿತಾ ಶೆಟ್ಟಿ, ಶಶಿಕಲಾ ಎನ್., ಚಂದ್ರು ಎಂ.ಎನ್. ಮೊದಲಾದವರು ಭಾಗವಹಿಸಿದ್ದರು. ಅಂಡಾರು ಗುಣಪಾಲ ಹೆಗ್ಡೆ ಸ್ವಾಗತಿಸಿದರು. ಕಾರ್ಯದರ್ಶಿ ಸದಾನಂದ ನಾರಾವಿ ವಂದಿಸಿದರು. ಹೋಬಳಿ ಘಟಕಾಧ್ಯಕ್ಷ ರಾಮಕೃಷ್ಣ ಶಿರೂರು ನಿರೂಪಿಸಿದರು. ಆಳ್ವಾಸ್, ಧವಲಾ, ಮಹಾವೀರ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು.

ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸುದರ್ಶನ ಶೆಟ್ಟಿ ಕಡಂದಲೆ(ಕನ್ನಡ ಸೇವೆ), ಪ್ರಸನ್ನ ಹೆಗ್ಡೆ(ಪತ್ರಿಕೋದ್ಯಮ), ದಾಮೋದರ ಸಫಲಿಗ(ಯಕ್ಷಗಾನ), ವೆಂಕಟೇಶ ಬಂಗೇರ (ಕಲೆಕರಗ/ನಾಟಕ), ಡಾ.ಕಿರಣ್ ಭಟ್ ಕಡಂದಲೆ(ವೈದ್ಯಕೀಯ), ಎಡ್ವರ್ಡ್ ರೆಬೆಲ್ಲೋ ತಾಕೊಡೆ(ಕೃಷಿ) ಅವರನ್ನು ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net